ಮಂಗಳೂರು, ಸೆ 27(DaijiworldNews/SM): ಪಚ್ಚನಾಡಿ ಪ್ರದೇಶಕ್ಕೆ ಕರ್ನಾಟಕ ಆರೋಗ್ಯ ಸಚಿವ ಶ್ರೀ ರಾಮುಲು ಅವರು ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತ್ಯಾಜ್ಯ ನೆರೆಯಿಂದಾಗಿ ಕಲುಷಿತಗೊಂಡಿರುವ ಪಚ್ಚನಾಡಿಯ ಸಂತ್ರಸ್ತರಿಗೆ ಸೂಕ್ತ ಪರಿಹಾರ ವ್ಯವಸ್ಥೆ ಕಲ್ಪಿಸಲು ಅಧಿಕಾರಿಗಳಿಗೆ ಆದೇಶ ನೀಡಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದ ನಾಯಕರಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ರಾಜ್ಯದಲ್ಲಿ ಬಿಜೆಪಿ ಬಲಿಷ್ಠವಾಗಿದೆ. ಯಡಿಯೂರಪ್ಪ ಮತ್ತು ನಳಿನ್ ಕುಮಾರ್ ಸಾರಥ್ಯದಲ್ಲಿ ಬಿಜೆಪಿ ಪಕ್ಷ ಬೆಳವಣಿಗೆ ಸಾಧಿಸುತ್ತಿದೆ ಎಂದರು.
ಬಳಿಕ ಸರ್ಕಿಟ್ ಹೌಸ್ ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರೂ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಬಿಜೆಪಿ ನಾಯಕರಾದ ವಿಭಾಗದ ಉದಯಕುಮಾರ್ ಶೆಟ್ಟಿ, ಕಿಶೋರ್ ರೈ, ಸಂತೋಷ್ ಕುಮಾರ್ ರೈ ಬೋಳಿಯಾರ್, ಮತ್ತಿತ್ತರರು ಉಪಸ್ಥಿತರಿದ್ದರು.