ಉಡುಪಿ, ಸೆ 27(DaijiworldNews/SM): ಶಾಸಕರಾದರೆ ಸಾಕು ಐಷರಾಮಿ ಕಾರು, ಬಂಗಲೆ ಬೇಕೆನ್ನುವುದು ಹಲವು ನಾಯಕರ ಆಸೆಯಾಗಿರುತ್ತದೆ. ಆದರೆ, ರಾಜ್ಯದ ಆರೋಗ್ಯ ಸಚಿವರು ಜನ ಸಾಮಾನ್ಯರೊಂದಿಗೆ ಬೆರೆತು ಆರೋಗ್ಯ ಸಮಸ್ಯೆ ಪರಿಹಾರಕ್ಕೆ ಕ್ರಮಕೈಗೊಳ್ಳುತ್ತಿದ್ದಾರೆ.
ಶುಕ್ರವಾರದಂದು ಉಡುಪಿ ಜಿಲ್ಲೆಗೆ ಭೇಟಿ ನೀಡಿದ ಆರೋಗ್ಯ ಸಚಿವ ಶ್ರೀರಾಮುಲು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದರು. ಹಾಗೂ ಆಸ್ಪತ್ರೆಯ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು. ಇಷ್ಟಕ್ಕೆ ಸುಮ್ಮನಾಗದ ಸಚಿವರು ಒಂದು ರಾತ್ರಿಯನ್ನು ಆಸ್ಪತ್ರೆಯಲ್ಲೇ ಕಳೆದಿದ್ದಾರೆ. ಆಸ್ಪತ್ರೆಯಲ್ಲಿನ ಬೆಡ್ ನಲ್ಲೇ ಮಲಗಿ ಮೂಲಭೂತ ಸೌಕರ್ಯಗಳ ಕೊರತೆ ಇದೆಯೇ ಎಂಬುವುದಾಗಿ ಪರಿಶೀಲನೆ ನಡೆಸಿದ್ದಾರೆ.
ಇನ್ನು ರಾಜ್ಯದಲ್ಲಿನ ಜನಸಾಮಾನ್ಯರಿಗೆ ಕೈಗೆಟಕುವ ದರದಲ್ಲಿ ಚಿಕಿತ್ಸೆಯನ್ನು ನೀಡುವ ಸರಕಾರಿ ಜಿಲ್ಲಾಸ್ಪತ್ರೆಗಳಲ್ಲಿ ಯಾವರೀತಿಯ ವ್ಯವಸ್ಥೆಗಳಿವೆ. ಹಾಗೂ ಏನೆಲ್ಲ ಕೊರತೆಗಳಿವೆ ಎಂಬುವುದನ್ನು ಕೂಲಂಕುಶವಾಗಿ ಪರೀಕ್ಷಿಸುವ ನಿಟ್ಟಿನಲ್ಲಿ ಸಚಿವರು ಕಾರ್ಯ ಪ್ರವೃತ್ತರಾಗಿದ್ದಾರೆ. ಮುಂದಿನ ದಿನಗಳಲ್ಲಿ ಆರೋಗ್ಯ ಸೇವೆಯಲ್ಲಿರುವ ಲೋಪಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸಚಿವರು ಪ್ರಾಮಾಣಿಕ ಪ್ರಯತ್ನ ನಡೆಸಲಿದ್ದಾರೆ.
ಇನ್ನು ಉಡುಪಿ ಶಾಸಕರಾದ ಕೆ ರಘುಪತಿ ಭಟ್, ಕಾಪು ಶಾಸಕರಾದ ಲಾಲಾಜಿ ಮೆಂಡನ್, ಜಿಲ್ಲಾ ಪಂಚಾಯಿತ್ ಅಧ್ಯಕ್ಷ ದಿನಕರ ಬಾಬು ಹಾಗೂ ಜಿಲ್ಲಾ ಮಟ್ಟದ ಪಕ್ಷದ ನಾಯಕರು ಕಾರ್ಯಕರ್ತರು ಜಿಲ್ಲಾ ಮಟ್ಟದ ವಿವಿಧ ಆರೋಗ್ಯ ಇಲಾಖಾ ಅಧಿಕಾರಿಗಳು ಆಸ್ಪತ್ರೆ ಸಿಬ್ಬಂದಿಗಳು ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಚಿವರ ಜತೆಗಿದ್ದರು.
en" scrolling="no" frameborder="0" allowTransparency="true" allowFullScreen="true">