ತೆಕ್ಕಟ್ಟೆ, ಸೆ 28 (Daijiworld News/MSP): ಕುಂಭಾಶಿಯಲ್ಲಿ ಅಪಘಾತಕ್ಕೀಡಾದ ಗಾಯಾಳುಗಳನ್ನು ಸ್ವತ ಆರೋಗ್ಯ ಸಚಿವ ಶ್ರೀರಾಮುಲು ಅವರು ತನ್ನ ವಾಹನದಲ್ಲಿ ಕರೆದುಕೊಂಡು ಆಸ್ಪತ್ರೆ ಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಕುಂಭಾಶಿ ರಸ್ತೆಯಲ್ಲಿ ಬೈಕ್ ಸವಾರರೋರ್ವರು ಲಾರಿಗೆ ಡಿಕ್ಕಿಯಾಗಿ ರಸ್ತೆಗೆ ಬಿದ್ದರು. ಇದೇ ಸಮಯದಲ್ಲಿ ಹಿಂದಿನಿಂದ ಬರುತ್ತಿದ್ದ ಆಟೋ ರಿಕ್ಷಾ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ಪಲ್ಟಿಯಾಯಿತು.
ಈ ಸಂದರ್ಭ ರಿಕ್ಷಾದಲ್ಲಿದ್ದ ಮೂವರು ಪ್ರಯಾಣಿಕರಿಗೆ ಗಾಯಗಳಾಯಿತು. ಇದೇ ವೇಳೆ ಉಡುಪಿಯಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಶಾಸಕ ರಘುಪತಿ ಭಟ್ ಸಚಿವ ಶ್ರೀರಾಮುಲು ಅಪಘಾತ ಗಮನಿಸಿ ಸ್ಥಳಕ್ಕೆ ಧಾವಿಸಿ ಬಂದರು. ಮಾತ್ರವಲ್ಲದೆ ಗಾಯಾಳುಗಳಿಗೆ ನೀರು ಕುಡಿಸಿ ಸಮಾಧಾನಿಸಿ ಗಾಯಾಳುಗಳನ್ನು ತಾನೇ ಎತ್ತಿ ಕಾರಿನಲ್ಲಿ ಕೂರಿಸಿದ ಆರೋಗ್ಯ ಸಚಿವರು ಬಳಿಕ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದರು.