ನವದೆಹಲಿ ಜ 1: ನೆರೆಯ ರಾಷ್ಟ್ರ ಪಾಕ್ ನಿಂದ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡಿ ಗುಂಡಿನ ದಾಳಿ ನಡೆಸುತ್ತಿದೆ. ಜತೆಗೆ ಭಯೋತ್ಪಾದನೆಗೂ ಕುಮ್ಮಕ್ಕು ನೀಡುತ್ತಿದೆ. ಹೀಗಾಗಿ ಯಾವುದೇ ಕಾರಣಕ್ಕೂ ಪಾಕ್ ಜೊತೆ ಯಾವುದೇ ರೀತಿಯ ಸ್ನೇಹ ಸಂಬಂಧ ಮುಂದುವರಿಸಲು ಸಾಧ್ಯವಿಲ್ಲ ಎಂದು ವಿದೇಶಾಂಗ ಸಚಿವೆ ತಿಳಿಸಿದ್ದಾರೆ.
ಸಂಸದೀಯ ಸಲಹಾ ಸಮಿತಿ ಜತೆಗಿನ ವಿದೇಶಾಂಗ ವ್ಯವಹಾರಗಳ ಕುರಿತ ಮಾತುಕತೆ ವೇಳೆಯಲ್ಲಿ ಸುಷ್ಮಾ ಸ್ವರಾಜ್ ಈ ಅಭಿಪ್ರಾಯ ವ್ಯಕ್ತಪಡಿಸಿದ್ದು, ಪಾಕಿಸ್ತಾನ ಭಯೋತ್ಪಾದಕರಿಗೆ ಕುಮ್ಮಕ್ಕು ನೀಡುವ ಮೂಲಕ ಭಾರತದಲ್ಲಿ ವಿದ್ವಂಸಕ ಕೃತ್ಯಗಳನ್ನು ಎಸಗಲು ಪರೋಕ್ಷವಾಗಿ ಬೆಂಬಲ ನೀಡುತ್ತಿದ್ದು ಈ ಹಿನ್ನೆಲೆಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ಜತೆ ಕ್ರಿಕೆಟ್ ಅಸಾಧ್ಯ ಎಂದು ಹೇಳಿದ್ದಾರೆ. ಎರಡು ದೇಶಗಳ ನಡುವೆ ಉಂಟಾಗಿರುವ ಬಿಗುವಿನ ವಾತಾವರಣ ತಿಳಿಗೊಳಿಸಲು ಕ್ರಿಕೆಟ್ ಆಡಲು ಸರ್ಕಾರ ಅವಕಾಶ ನೀಡುತ್ತದೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಸುಷ್ಮಾ ಸ್ವರಾಜ್ ಅವರು ಮಾನವೀಯ ನೆಲೆಗಟ್ಟಿನ ಮೇಲೆ ವಯಸ್ಸಾದ ಕೈದಿಗಳನ್ನು ಹಾಗೂ ಮಹಿಳೆಯರನ್ನು ಬಿಡುಗಡೆಗೊಳಿಸಬಹುದು ಎಂಬ ಸಲಹೆಗಳು ಬಂದಿವೆ. ಆದರೆ ಕ್ರಿಕೆಟ್ ಆಡಿಸಲು ಸೂಕ್ತ ಸಮಯ ಇದು ಖಂಡಿತಾ ಎಂದು ಹೇಳಿದ್ದಾರೆ.ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ಸಿಆರ್'ಪಿಎಫ್ ತರಬೇತಿ ಕೇಂದ್ರದ ಮೇಲೆ ಉಗ್ರರು ದಾಳಿ ನಡೆಸಿದ್ದು ಈ ಉಗ್ರ ದಾಳಿಯಲ್ಲಿ ಐವರು ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸುಷ್ಮಾ ಸ್ವರಾಜ್ ಅವರು ದ್ವಿಪಕ್ಷೀಯ ಕ್ರಿಕೆಟ್ ಕುರಿತಂತೆ ಪಾಕಿಸ್ತಾನಕ್ಕೆ ಖಾರವಾದ ಉತ್ತರ ನೀಡಿದ್ದಾರೆ.