ಮಂಗಳೂರು, ಸೆ 29(Daijiworld News/MSP): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಂಕಿತ ಡೆಂಗ್ಯೂ ಜ್ವರಕ್ಕೆ ಮತ್ತೊಬ್ಬ ಬಾಲಕ ಬಲಿಯಾಗಿದ್ದಾನೆ. ಮೃತಪಟ್ಟ ಬಾಲಕನನ್ನು ಪುತ್ತೂರಿನ ರಂಜನ್ (15) ಎಂದು ಗುರುತಿಸಲಾಗಿದೆ. ತೀವ್ರ ಜ್ವರದ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿ ರಂಜಿತ್ ನನ್ನು ನಗರದ ವೆನ್ಲಾಕ್ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಆರೋಗ್ಯ ಸ್ಥಿತಿ ವಿಷಮಿಸಿದ್ದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಮತ್ತೊಂದು ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ಅಷ್ಟರಲ್ಲಾಗಲೇ ಬಾಲಕ ಮೃತಪಟ್ಟಿದ್ದಾನೆ ಎಂದು ಅಲ್ಲಿನ ವೈದ್ಯರು ತಿಳಿಸಿದ್ದಾರೆ.
ಆದರೆ ಇನ್ನೂ ರಂಜಿತ್ ಆದರೆ ರಂಜಿತ್ ಡೆಂಗ್ಯೂ ಜ್ವರಕ್ಕೆ ಬಲಿಯಾಗಿದ್ದಾರೆ ಅಥವಾ ಇನ್ಯಾವುದೋ ಕಾಯಿಲೆಗೆ ಸಾವನ್ನಪ್ಪಿದ್ದಾನೆ ಎಂದು ಹೆಚ್ಚಿನ ವೈದ್ಯಕೀಯ ಪರೀಕ್ಷೆಯಿಂದಷ್ಟೇ ತಿಳಿದುಬರಬೇಕಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ತಿಂಗಳಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಶಂಕಿತ ಡೆಂಗ್ಯೂಗೆ ಬಲಿಯಾಗಿರುವುದು ಗಂಬೀರ ವಿಚಾರ.