ಮಂಗಳೂರು, ಸೆ 29(Daijiworld News/MSP): ದಕ್ಷಿಣ ಕನ್ನಡಕ್ಕೆ ಇನ್ನೊಂದು ಹೆಮ್ಮೆಯ ಗರಿ ಮುಡಿಗೇರಿದೆ. ಜಿಲ್ಲೆಯ 5 ಗ್ರಾಮಗಳು ಗಾಂಧಿ ಗ್ರಾಮ ಪುರಸ್ಕಾಕ್ಕೆ ಆಯ್ಕೆಯಾಗಿವೆ. 2018-19ನೇ ಸಾಲಿನ ಗಾಂಧಿ ಗ್ರಾಮ ಪ್ರಶಸ್ತ್ರಿ ಐದು ಗ್ರಾಪಂಗಳು ಆಯ್ಕೆಯಾಗಿವೆ.
ದಕ್ಷಿಣ ಕನ್ನಡ ಜಿಲ್ಲೆಯ, ಮಂಗಳೂರು ತಾಲೂಕಿನ ಕಲ್ಲಮುಂಡ್ಕೂರು ಗ್ರಾಮಪಂಚಾಯತ್, ಬಂಟ್ವಾಳದಿಂದ ವಿಟ್ಲ ತಾಲೂಕಿನ ಪಡ್ನೂರು, ಪುತ್ತೂರು ತಾಲೂಕಿನ ಕುಟ್ರುಪ್ಪಾಡಿ, ಬೆಳ್ತಂಗಡಿಯಿಂದ ಮಡಂತ್ಯಾರು ಹಾಗೂ ಸುಳ್ಯದಿಂದ ಕಲ್ಮಡ್ಕ 'ಗಾಂಧಿ ಗ್ರಾಮ ಪುರಸ್ಕಾರ' ಕ್ಕೆ ಆಯ್ಕೆಯಾಗಿವೆ.
ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಜಯಂತಿ ಅಕ್ಟೊಬರ್ 2 ರಂದು ಬೆಂಗಳೂರಿನಲ್ಲಿ ಜರಗುವ ಕಾರ್ಯಕ್ರಮದಲ್ಲಿ ಈ ಗ್ರಾಮ ಪಂಚಾಯತ್ ಗಳಿಗೆ ಪ್ರಶಸ್ತಿ ಪ್ರದಾನ ನಡೆಯಲಿದೆ. ಪುರಸ್ಕಾರ ಪಡೆಯಲಿರುವ ಗ್ರಾಮ ಪಂಚಾಯತ್ ಗಳು ತಮ್ಮ ಕಾರ್ಯಕ್ಷಮತೆ ಮತ್ತು ಆವಿಷ್ಕಾರ ಗಳಿಗೆ ಪ್ರೋತ್ಸಾಹ ರೂಪದಲ್ಲಿ ತಲಾ ರೂಪಾಯಿ 5 ಲಕ್ಷ ನಗದು ಪುರಸ್ಕಾರ ಪಡೆಯಲಿವೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಶಸ್ತಿಯ 5 ಲಕ್ಷ ರು. ಪ್ರೋತ್ಸಾಹ ಧನದಲ್ಲಿ ಗ್ರಾಮ ಪಂಚಾಯತ್ ತನ್ನ ವ್ಯಾಪ್ತಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ, ಸರ್ಕಾರಿ ಶಾಲೆಗೆ ಆಟದ ಮೈದಾನ, ಸೋಲಾರ್ ದೀಪ ಅಳವಡಿಕೆ, ಗ್ರಾಮೀಣ ಗೌರವ ಯೋಜನೆ ಸೇರಿದಂತೆ ಹತ್ತಾರು ಮೂಲಭೂತ ಸವಲತ್ತುಗಳ ಅಭಿವೃದ್ಧಿಗೆ ಬಳಸಿಕೊಳ್ಳಬಹುದಾಗಿದೆ.