ಸುರತ್ಕಲ್ ಜ 4: ಕಾಟಿಪಳ್ಳ ನಿವಾಸಿ ಹಾಗೂ ಹಿಂದೂ ಸಂಘಟನೆ ಕಾರ್ಯಕರ್ತ ದೀಪಕ್ ರಾವ್ ಹತ್ಯೆಯ ಸುರತ್ಕಲ್ನಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಬುಧವಾರ ರಾತ್ರಿ ಇಲ್ಲಿ ಮತ್ತಿಬ್ಬರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವುದಾಗಿ ವರದಿಯಾಗಿದೆ. ಈ ಪೈಕಿ ಮಂಗಳೂರಿನಿಂದ ಕಾಟಿಪಳ್ಳಕ್ಕೆ ಬೈಕ್ನಲ್ಲಿ ತೆರಳುತ್ತಿದ್ದ ಯುವಕ ಮುಬಶೀರ್(22) ಮೇಲೆ ದುಷ್ಕರ್ಮಿಗಳು ಕೊಟ್ಟಾರ ಚೌಕಿ ಬಳಿ ಹಲ್ಲೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಮುಬಶೀರ್ ಮಂಗಳೂರಿನ ಬಂದರು ನಿವಾಸಿಯಾಗಿದ್ದು, ಕಾಟಿಪಳ್ಳದಲ್ಲಿ ತಮ್ಮ ಸಂಬಂಧಿಯೊಬ್ಬರ ಮದುವೆಯಲ್ಲಿ ಭಾಗವಹಿಸುವುದಕ್ಕೆ ತೆರಳುವ ವೇಳೆ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮುಬಶೀರ್ ಮೇಲೆ ಹಲ್ಲೆ ಮಾಡಿದ್ದು, ಇದರಿಂದ ತಲೆಗೆ ತೀವ್ರ ಪಟ್ಟು ಬಿದ್ದಿದ್ದು, ಮಂಗಳೂರಿನ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ.