ಮಂಗಳೂರು, ಜ 5: ಕಾಟಿಪಳ್ಳದಲ್ಲಿ ನಡೆದಿರುವ ದೀಪಕ್ ಹತ್ಯೆ ಪ್ರಕರಣದಲ್ಲಿ ಬಿಜೆಪಿ ಪಕ್ಷದ ಕೈವಾಡವಿದೆ ಎಂದು ಶಾಸಕ ಮೊಯ್ದಿನ್ ಬಾವಾ ಗಂಭೀರವಾದ ಆರೋಪ ಮಾಡಿದ್ದಾರೆ.
ದೀಪಕ್ ಹತ್ಯೆ ಪ್ರಕರಣದಲ್ಲಿ ರಾಜಕೀಯ ಕೆಸರೆರೆಚಾಟ ಆರಂಭಗೊಂಡಿದ್ದು, ಪ್ರಕರಣದ ಹಿಂದೆ ಬಿಜೆಪಿ ಕೈವಾಡ ಇದೆ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ಶಾಸಕ ಮೊಯ್ದಿನ್ ಬಾವಾ ಪ್ರತಿಕ್ರಿಯೆ ನೀಡಿದ್ದಾರೆ.
ದೀಪಕ್ ರಾವ್ ಅಮಾಯಕ. ಅವರನ್ನು ಯಾವ ಕಾರಣಕ್ಕೆ ಹತ್ಯೆ ನಡೆಸಿದ್ದಾರೆ ಎಂದು ಗೊತ್ತಿಲ್ಲ. ದೀಪಕ್ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿರುವ ಪಿಂಕಿ ನವಾಜ್ ಸಹೋದರ ಲಾದನ್ ಇಸ್ಮಾಯಿಲ್ ಮತ್ತು ಬಾಮೈದ ಮಹಮ್ಮದ್ ಬಿಜೆಪಿ ಕಾರ್ಯಕರ್ತರು ಎಂದು ಆರೋಪಿಸಿದ್ದಾರೆ.