ಮಂಗಳೂರು, ಜ 5: ನಗರದಲ್ಲಿ ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಹತ್ಯೆಯನ್ನು ಖಂಡಿಸಿ ಸಂಘಟನೆಗಳಿಂದ ಪ್ರತಿಭಟನೆಗಳು ನಡೆಯುತ್ತಿದೆ.
ಬೆಸೆಂಟ್ ವೃತ್ತದಲ್ಲಿ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ದೀಪಕ್ ಹತ್ಯೆಯನ್ನು ಖಂಡಿಸಿ, ರಸ್ತೆ ತಡೆ ನಡೆಸಿ ಪ್ರತಿಭಟನೆಯನ್ನು ನಡೆಸಿದರು.
ಪ್ರತಿಭಟನೆಯಲ್ಲಿ ಉಸ್ತುವಾರಿ ಸಚಿವ ಬಿ ರಮಾನಾಥ ರೈ ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಬಿಜೆಪಿ ಮುಖಂಡರು. ಹಿಂದೂ ಪರ ಸಂಘಟನೆಯ ಅನೇಕ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದು, ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ನಡೆಸಿದ ಎಂ.ಬಿ ಪುರಾಣಿಕ್, ಜಗದೀಶ್ ಶೇಣವಾ, ಶರಣ್ ಪಂಪ್ ವೆಲ್, ವೇದವ್ಯಾಸ್ ಕಾಮತ್, ಮೋನಪ್ಪ ಭಂಡಾರಿ ಮೊದಲಾದವರನ್ನು ಪೊಲೀಸರು ಬಂಧಿಸಿದ ಪ್ರಸಂಗವೂ ನಡೆದಿದೆ.