ಮಂಗಳೂರು, ಜ 5: ಕಾಟಿಪಳ್ಳದ ದೀಪಕ್ ಹತ್ಯೆ ಪ್ರಕರಣದಲ್ಲಿ ಯಾರೂ ರಾಜಕೀಯ ಲಾಭ ಪಡೆದುಕೊಳ್ಳಬಾರದು ಎಂದು ಆಹಾರ ಖಾತೆ ಸಚಿವ ಯು ಟಿ ಖಾದರ್ ಹೇಳಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಹತ್ಯೆಗೈದ ಆರೋಪಿಗಳನ್ನು ಪೊಲೀಸರು ಈಗಾಗಲೇ ಕಾರ್ಯಾಚರಣೆ ಮೂಲಕ ಬಂಧಿಸಿದ್ದಾರೆ. ಪೊಲೀಸ್ ತನಿಖೆ ನಡೆದ ಬಳಿಕವಷ್ಟೇ ಕಾರಣ ಗೊತ್ತಾಗಲಿದೆ. ಆದರೆ ಪೊಲೀಸ್ ತನಿಖೆ ದಾರಿ ತಪ್ಪಿಸಲು ಕೆಲವರು ಸಾಮಾಜಿಕ ಜಾಲ ತಾಣಗಳಲ್ಲಿ ನನ್ನ ಹಾಗೂ ಇಲ್ಯಾಸ್ ಪೋಟೋ ಹಾಕುತ್ತಿದ್ದಾರೆ. ಇದು ಸುಳ್ಳು ಎಂದು ಹೇಳಿದರು.
ಈಗಾಗಲೇ ಪೊಲೀಸರು ದೀಪಕ್ ಹತ್ಯೆ ಪ್ರಕರಣಕ್ಕೂ ಇಲಿಯಾಸ್ಗೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈಗ ಟಾರ್ಗೆಟ್ ಗ್ರೂಪ್ ಕಾರ್ಯನಿರ್ವಹಿಸುತ್ತಿಲ್ಲ. ಪೊಲೀಸರು ಇದನ್ನು ಮಟ್ಟ ಹಾಕಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.