ಬಂಟ್ವಾಳ, ಅ 15 (Daijiworld News/MSP):ಯುವತಿಯೋರ್ವಳು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ಬರಿಮಾರು ಎಂಬಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡವರನ್ನು ಬರಿಮಾರು ಗ್ರಾಮದ ಪಾಪೆತ್ತಿಮಾರು ನಿವಾಸಿ, ಲಿಂಗಪ್ಪ ಪೂಜಾರಿ ಎಂಬವರ ಪುತ್ರಿ ತುಳಸಿ (30) ಎಂದು ಗುರುತಿಸಲಾಗಿದೆ. ರಾತ್ರಿ ಮಲಗಿದ್ದ ತುಳಸಿ ಸೋಮವಾರ ಮುಂಜಾನೆ ವೇಳೆಗೆ ನಾಪತ್ತೆಯಾಗಿದ್ದು, ಮಂಗಳವಾರ ಬೆಳಗ್ಗೆ ಬರಿಮಾರು ಗ್ರಾಮದ ಪಾಪೆತ್ತಿಮಾರು ಕಡವಿ ಬಳಿಯ ನೇತ್ರಾವತಿ ನದಿಯಲ್ಲಿ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಠಾಣೆ ಎಸ್ಸೈ ಪ್ರಸನ್ನ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.