ಉಡುಪಿ, ಅ 15 (DaijiworldNews/SM): ಜಿಲ್ಲೆಯ ಕಂದಾಯ ಇಲಾಖೆ ವ್ಯಾಪ್ತಿಯ ಎಲ್ಲಾ ಕಚೇರಿಗಳಲ್ಲಿ ಇ-ಆಡಳಿತ ವ್ಯವಸ್ಥೆಯನ್ನು ಜಾರಿಗೊಳಿಸಲಾಗುತ್ತಿದೆ ಎಂದು ಅಪರ ಜಿಲ್ಲಾಧಿಕಾರಿ ಸುದಾಶಿವ ಪ್ರಭು ಹೇಳಿದರು.
ಅವರು ಮಂಗಳವಾರ, ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆಯ ಕಂದಾಯ ಇಲಾಖೆ ವ್ಯಾಪ್ತಿಯ ಎಲ್ಲಾ ಕಚೇರಿಗಳ ಸಿಬ್ಬಂದಿಗಳಿಗೆ ಆಯೋಜಿಸಿದ್ದ ಇ-ಆಡಳಿತ ಕುರಿತ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಂದಾಯ ಇಲಾಖೆ ವ್ಯಾಪ್ತಿಯ ಎಲ್ಲಾ ಕಚೇರಿಗಳಲ್ಲಿ ಇ-ಆಡಳಿತ ಜಾರಿಗೊಳಿಸುವ ಮೂಲಕ ಪೇಪರ್ ಲೆಸ್ ಕಚೇರಿ ನಿರ್ಮಾಣದ ಜೊತೆಗೆ ಸಾರ್ವಜನಿಕರ ತ್ವರಿತ ಗತಿಯಲ್ಲಿ ಸೇವೆಗಳನ್ನು ಒದಗಿಸುವ ಜೊತೆಗೆ ಆಡಳಿತದಲ್ಲಿ ಪಾರದರ್ಶಕ ಆಡಳಿತ ವ್ಯವಸ್ಥೆ ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.
ಇ-ಆಡಳಿತ ವ್ಯವಸ್ಥೆಯಲ್ಲಿ ಕಾರ್ಯ ನಿರ್ವಹಿಸುವ ಕುರಿತಂತೆ ಹರ್ಷರಾಜ್ ತರಬೇತಿ ನೀಡಿದರು. ಜಿಲ್ಲೆಯ ಎಲ್ಲಾ ತಾಲೂಕುಗಳ ಕಂದಾಯ ಇಲಾಖೆ ವ್ಯಾಪ್ತಿಯ ಸಿಬ್ಬಂದಿ ತರಬೇತಿಯಲ್ಲಿ ಹಾಜರಿದ್ದರು.