ಮಂಗಳೂರು, ಜ 6: ನಗರದ ಗುರುಪುರ ನದಿಯಲ್ಲಿ ಅಪ್ರಾಪ್ತ ಬಾಲಕಿಯ ಶವ ಶನಿವಾರ ಬೆಳಗ್ಗೆ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ.
ಮೃತ ದುರ್ದೈವಿಯನ್ನು ಉಲಾಯಿಬೆಟ್ಟು ನಿವಾಸಿ ತನುಶ್ರಿ (17) ಎಂದು ಗುರುತಿಸಲಾಗಿದೆ.
ಕಂಕನಾಡಿ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು, ಶವವನ್ನು ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ.
ಮರಣೋತ್ತರ ಪರೀಕ್ಷೆ ನಡೆದ ಬಳಿಕ ಸಾವಿನ ಬಗ್ಗೆ ನಿಖರ ಮಾಹಿತಿ ತಿಳಿದುಬರಲಿದೆ.