ಮಂಗಳೂರು, ಜ 6: ನಗರದ ಕೊಟ್ಟಾರ ಚೌಕಿಯಲ್ಲಿ ಜನವರಿ 3 ರಂದು ರಾತ್ರಿ ಬಶೀರ್ ಹತ್ಯೆಗೆ ಯತ್ನಿಸಿದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
7 ಜನರ ತಂಡದಿಂದ ಬಷೀರ್ ಮೇಲೆ ಹಲ್ಲೆ ನಡೆದಿತ್ತು. ಇದೀಗ ಪೊಲೀಸರು ನಾಲ್ವರು ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಪೊಲೀಸರ ವಶದಲ್ಲಿರುವ ನಾಲ್ವರು ಆರೋಪಿಗಳು, ಈ ಹಿಂದೆ ಕ್ರಿಮಿನಲ್ ಕೃತ್ಯಗಳಲ್ಲಿ ಭಾಗಿಯಾಗಿದ್ದವರು ಎಂದು ತಿಳಿದುಬಂದಿದೆ.
ಸುರತ್ಕಲ್ ಕಾಟಿಪಳ್ಳದಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತ ದೀಪಕ್ ರಾವ್ ಹತ್ಯೆಗೆ ಪ್ರತಿಕಾರವಾಗಿ ಬಶೀರ್ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರು.
ಬಶೀರ್ ಫಾಸ್ಟ್ ಪುಡ್ ಅಂಗಡಿ ನಡೆಸುತ್ತಿದ್ದು, ಅಂಗಡಿ ಮುಚ್ಚಿ ಮನೆಗೆ ಹೋಗುವ ಸಂದರ್ಭ ಈ ಹಲ್ಲೆ ನಡೆದಿತ್ತು. ಇದೀಗ ಖಾಸಗಿ ಆಸ್ಪತ್ರೆಯಲ್ಲಿ ಬಶೀರ್ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.