ಮಂಗಳೂರು, ಅ 10 (DaijiworldNews/SM): ಯಡಿಯೂರಪ್ಪ ಬಿಜೆಪಿ ಹೈಕಮಾಂಡ್ ಒಪ್ಪದ ಮುಖ್ಯಮಂತ್ರಿಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಬಿಎಸ್ ವೈ ಮುಖ್ಯಮಂತ್ರಿಯಾಗುವುದನ್ನು ಇಷ್ಟಪಟ್ಟಿರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಗರದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಮಂಗಳೂರಿನಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ ಬಿಜೆಪಿ ಸರಕಾರ ಇನ್ನೆರಡು ತಿಂಗಳಲ್ಲಿ ಪತನಗೊಳ್ಳಲಿದೆ. ಸ್ವತಃ ಯಡಿಯೂರಪ್ಪ ಅವರೇ ತಾನು ತಂತಿಯ ಮೇಲೆ ನಡೆಯುತ್ತೀದ್ದೇನೆ ಎಂದು ಹೇಳಿದ್ದಾರೆ. ಈ ನಡುವೆ ಯಡಿಯೂರಪ್ಪನವರನ್ನು ಮುಖ್ಯಮಂತ್ರಿಯಾಗಿ ಮುಂದುವರೆಸಲು ಬಿಜೆಪಿ ಹೈಕಮಾಂಡ್ ಗೆ ಇಷ್ಟವಿಲ್ಲ ಎಂದಿದ್ದಾರೆ.
ಪ್ರಸ್ತುತ ರಾಜ್ಯದಲ್ಲಿ ನಡೆಯುವ ಕೆಲವೊಂದು ಬೆಳವಣಿಗೆಗಳು ಹಾಗೂ ಅಧಿಕಾರಕ್ಕೇರಿದ ಹಿನ್ನೆಲೆಯಲ್ಲಿ ಒಂದಿಷ್ಟು ದಿನ ಸಿಎಂ ಖುರ್ಚಿಯಲ್ಲಿ ಬಿಎಸ್ ವೈ ಅವರನ್ನು ಮುಂದುವರೆಸಲಿದ್ದಾರೆ. ಆದರೆ, ಇದು ಹೆಚ್ಚು ಸಮಯ ಉಳಿಯುವುದಿಲ್ಲ ಎಂದಿದ್ದಾರೆ.