ಮಂಗಳೂರು, ಅ 18 (DaijiworldNews/SM): ದೇಶದಲ್ಲಿ ನಡೆಯುತ್ತಿರುವ ಬ್ಯಾಂಕುಗಳ ವಿಲೀನ ಪ್ರಕ್ರಿಯೆಯನ್ನು ವಿರೋಧಿಸಿ ವಿವಿಧ ಕಾರ್ಮಿಕ ಸಂಘಟನೆಗಳಿಂದ ಅಕ್ಟೋಬರ್ 18ರಂದು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.
ಶುಕ್ರವಾರದಂದು ಸಂಜೆ ಪಾಂಡೇಶ್ವರದ ಕಾರ್ಪೊರೇಶನ್ ಬ್ಯಾಂಕ್ ಪ್ರಧಾನ ಕಚೇರಿ ಆವರಣದಲ್ಲಿ ಕಾರ್ಮಿಕ ಸಂಘಟನೆಯವರು ಕ್ಯಾಂಡಲ್ ಬೆಳಗಿಸಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಗೆ ಕಾರ್ಮಿಕರು ಹಾಗೂ ಸಾರ್ವಜನಿಕರು ಬೆಂಬಲ ನೀಡಿದರು.
ದೇಶದ ಆರ್ಥಿಕತೆಯಲ್ಲಿ ಪ್ರಧಾನ ಪಾತ್ರ ಬ್ಯಾಂಕ್ ಗಳದ್ದೇ ಆಗಿದೆ. ಅಂತಹ ಬ್ಯಾಂಕ್ ಗಳ ರಕ್ಷಣೆ ನಮ್ಮೆಲರ ಹೊಣೆಯಾಗಿದ್ದು ಆ ಕಾರಣದಿಂದ ಪ್ರತಿಭಟನೆ ಅನಿವಾರ್ಯ ಎಂದು ಕಾರ್ಮಿಕರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಈಗಾಗಲೇ ದೇಶದಲ್ಲಿ ಬ್ಯಾಂಕ್ ಗಳ ವಿಲೀನ ಮಾಡಲಾಗಿದೆ. ಇನ್ನು ಹಲವು ಬ್ಯಾಂಕ್ ಗಳ ವಿಲೀನಕ್ಕಾಗಿ ಪ್ರಕ್ರಿಯೆಗಳು ನಡೆಯುತ್ತಿದೆ.