ಸುಳ್ಯ, ಅ 19 (Daijiworld News/MSP): ಪಾದಚಾರಿ ಶಿಕ್ಷಕಿಯೋರ್ವರಿಗೆ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಅ. 19 ರ ಶನಿವಾರದಂದು ಸುಳ್ಯದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ನಿವೃತ್ತ ಶಿಕ್ಷಕ ಹರಿಪ್ರಸಾದ್ ಮಾಸ್ತರ್ ಅವರ ಧರ್ಮಪತ್ನಿ ಸುಳ್ಯದ ನಿವೃತ್ತ ಶಾಲಾ ಶಿಕ್ಷಕಿ ಮೀನಾಕ್ಷಿ ಎಂದು ಗುರುತಿಸಲಾಗಿದೆ.
ಕಾರ್ಯಕ್ರಮವೊಂದಕ್ಕೆ ತೆರಳಿದ್ದ ಮೀನಾಕ್ಷಿಯವರು ಸುಳ್ಯದ ಹಳೇಗೇಟು ಸಮೀಪದ ವಿದ್ಯಾನಗರ ಎಂಬಲ್ಲಿ ರಸ್ತೆ ದಾಟುತ್ತಿದ್ದ ವೇಳೆ, ಪೈಚಾರು ಕಡೆಯಿಂದ ಸುಳ್ಯದ ಕಡೆದೆ ಆಗಮಿಸಿದ ಕೆ ಎಸ್ ಆರ್ ಟಿ ಸಿ ಬಸ್ಸೊಂದು ಢಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ತಲೆಗೆ ಗಂಭೀರ ಗಾಯಗಳಾಗಿ ಮೀನಾಕ್ಷಿ ಸ್ಥಳದಲ್ಲೇ ಅಸುನೀಗಿದ್ದಾರೆ.
ಸ್ಥಳಕ್ಕೆ ಸುಳ್ಯ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಸ್ಸು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.