ಮಂಗಳೂರು, ಅ 19 (DaijiworldNews/SM): ಕೇಂದ್ರದ ಮಾಜಿ ಸಚಿವ ಹಾಗೂ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿಯ ರೂವಾರಿ ಜನಾರ್ದನ ಪೂಜಾರಿಯವರ ವಿರುದ್ಧ ಅಪಪ್ರಚಾರ ನಡೆಸಲಾಗುತ್ತಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಶ್ರೀ ಗೋಕರ್ಣನಾಥ ಕ್ಷೇತ್ರದ ವತಿಯಿಂದ ಮಂಗಳೂರು ಪೊಲೀಸ್ ಕಮಿಷನರ್ ಡಾ. ಹರ್ಷಾ ಅವರಿಗೆ ಮನವಿ ಸಲ್ಲಿಸಲಾಗಿದೆ.
ಜನಾರ್ದನ ಪೂಜಾರಿಯವರ ವಿರುದ್ಧ ಸಾಮಾಜಿಕ ಜಾಲ ತಾಣದಲ್ಲಿ ಅಪಪ್ರಚಾರ ನಡೆಸಲಾಗಿದೆ. ‘ಜನಾರ್ದನ ಪೂಜಾರಿ ಅವರ ಆರೋಗ್ಯ ಏರುಪೇರಾಗಿದೆ. ಅವರು ತೀವ್ರ ಅಸ್ವಸ್ಥರಾಗಿದ್ದಾರೆ’ ಎಂಬಂತಹ ಸುಳ್ಳು ಸುದ್ದಿಗಳನ್ನು ಹಬ್ಬಿಸಲಾಗುತ್ತಿದೆ. ನಿಷ್ಟಾವಂತ ಹಾಗೂ ಹಿರಿಯ ರಾಜಕಾರಣಿಯ ವಿರುದ್ಧ ಅಪಪ್ರಚಾರ ನಡೆಸುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ.
ಅಪಪ್ರಚಾರ ನಡೆಸುವವರ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದು, ಇನ್ನು ಮುಂದೆ ಅಪಪ್ರಚಾರ ನಡೆಸದಂತೆ ಎಚ್ಚರಿಕೆಯನ್ನು ನೀಡಬೇಕು ಎಂದು ಆಗ್ರಹಿಸಿದ್ದಾರೆ. ಕ್ರಮ ಕೈಗೊಳ್ಳದಿದ್ದಲ್ಲಿ ಉಗ್ರ ಹೋರಾಟ ನಡೆಸಲಾಗುವುದಾಗಿ ಎಚ್ಚರಿಕೆ ನೀಡಿದ್ದಾರೆ.