ಮಂಗಳೂರು, ಅ 21 (Daijiworld News/MSP): ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಇದರ ಪರಿಣಾಮ ಕರಾವಳಿ ಹಾಗೂ ಕೇರಳದ 12 ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಆರೇಂಜ್ ಅಲರ್ಟ್ ಎಚ್ಚರಿಕೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ , ಉತ್ತರ ಕನ್ನಡದಲ್ಲಿ ಅ. 21ರಿಂದ 23 ರವರೆಗೆ ಅರೆಂಜ್ ಆಲರ್ಟ್ ಘೋಷಿಸಲಾಗಿದ್ದು, ಆ ಬಳಿಕ ಅ.24ರಿಂದ 26 ರವರೆ ರೆಡ್ ಅಲರ್ಟ್ ಘೋಷಿಸಿದ್ದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕೇರಳದಲ್ಲಿ ತಿರುವನಂತಪುರಂ, ಕೊಲ್ಲಂ, ಅಲಫ್ಪುಝಾ, ಪಟ್ಟಣಂತಿಟ್ಟ, ಕೊಟ್ಟಾಯಂ, ಇಡುಕ್ಕಿ, ಎರ್ನಾಕುಲಂ, ತ್ರಿಶ್ಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಝಿಕೋಡ್ ಮತ್ತು ವಯನಾಡ್ ಸೇರಿ 12 ಜಿಲ್ಲೆಗಳಲ್ಲಿ ಭಾರೀ ವರ್ಷಧಾರೆಯಾಗಲಿದೆ.