ಬೆಳ್ತಂಗಡಿ, ಅ 21 (DaijiworldNews/SM): ತಾಲೂಕಿನ ಪ್ರವಾಹ ಪೀಡಿತ ಪ್ರದೇಶಕ್ಕೆ ಕಂದಾಯ ಸಚಿವ ಆರ್. ಅಶೋಕ್ ಭೇಟಿ ನೀಡಿದರು. ಅಧಿಕಾರಿಗಳು ಹಾಗೂ ಪಕ್ಷದ ಮುಖಂಡರೊಂಡಿಗೆ ತೆರಳಿದ ಅವರು ಸ್ಥಳೀಯರೊಂದಿಗೆ ಚರ್ಚಿಸಿ ಮಾಹಿತಿ ಪಡೆದುಕೊಂಡರು.
ಇನ್ನು ಪ್ರವಾಹಕ್ಕೆ ಸಿಲುಕಿ ಕೊಚ್ಚಿಹೋದ ಮೊಗ್ರು ಗ್ರಾಮದ ಮುಗೇರಡ್ಕ ತೂಗುಸೇತುವೆಯನ್ನು ವೀಕ್ಷಿಸಿದರು. ಅಲ್ಲದೆ, ತಾಲೂಕಿನಲ್ಲಿ ಪ್ರವಾಹಕ್ಕೆ ಸಿಲುಕಿದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮತ್ತಿತರರು ಜೊತೆಗಿದ್ದರು. ಇನ್ನು ಈ ಸಂದರ್ಭ ಪ್ರತಿಕ್ರಿಯೆ ನೀಡಿದ ಅವರು ಸೇತುವೆಯ ಮರು ನಿರ್ಮಾಣ ಮತ್ತು ಶಾಶ್ವತ ಸೇತುವೆ ನಿರ್ಮಾಣದ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ. ಶಾಸಕ ಹರೀಶ್ ಪೂಂಜಾ ಮುಂದಾಳತ್ವದಲ್ಲಿ ಕಾಮಗಾರಿ ಶೀಘ್ರದಲ್ಲೇ ಆರಂಭಗೊಂಡು ಶಾಶ್ವತ ಸೇತುವೆ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಸಚಿವರು ಭರವಸೆ ನೀಡಿದರು.