ಉಡುಪಿ, ಅ 23 (DaijiworldNews/SM): ಉಡುಪಿ ಜಿಲ್ಲೆಯ ಕರಾವಳಿ ನಿಯಂತ್ರಣ ವಲಯದ ಹಾಗೂ ಕರಾವಳಿ ನಿಯಂತ್ರಣ ವಲಯ ಹೊರತು ಪಡಿಸಿದ ನದಿ ಪಾತ್ರಗಳಲ್ಲಿ ಮರಳು ದಿಬ್ಬ ಆರಂಭಿಸಲು ಪರವಾನಿಗೆ ನೀಡಲಾಗಿದ್ದು, ಈ ಕಾರ್ಯಪ್ರಗತಿಯಲ್ಲಿದೆ.
ಉಡುಪಿ ಜಿಲ್ಲೆಯಲ್ಲಿ ಕಟ್ಟಡ ನಿರ್ಮಾಣ ಮಾಲೀಕರು, ಗುತ್ತಿಗೆದಾರರು ಹಾಗೂ ಮಂಜೂರಾದ ಕಟ್ಟಡದ ಕಾಮಗಾರಿಗಳ ಅವಶ್ಯಕತೆಗನುಗುಣವಾಗಿ ಮರಳನ್ನು ಸಾಗಾಟ ಪರವಾನಿಗೆಯೊಂದಿಗೆ ಉಪಯೋಗಿಸಬೇಕು. ಇದನ್ನು ಹೊರತುಪಡಿಸಿ ಮರಳಿನ ದಾಸ್ತಾನು ಹಾಗೂ ಅನಧಿಕೃತ ಮರಳಿನ ದಾಸ್ತಾನು ಕಂಡುಬಂದಲ್ಲಿ ಸದರಿ ದಾಸ್ತಾನುಗಳ ಹಾಗೂ ಸಂಬಂಧಿಸಿದವರ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಜಿಲ್ಲಾಡಳಿತವು ತೀರ್ಮಾನಿಸಿದೆ.
ಆದ್ದರಿಂದ ಕಟ್ಟಡ ನಿರ್ಮಾಣ ಮಾಲೀಕರು, ಗುತ್ತಿಗೆದಾರರು ಹಾಗೂ ಸಾರ್ವಜನಿಕರು ಮರಳು ದಾಸ್ತಾನು ಹಾಗೂ ಅನಧಿಕೃತ ಮರಳು ದಾಸ್ತಾನು ಮಾಡುವುದು ಹಾಗೂ ಮಾಡಿರುವುದು ಕಂಡುಬಂದಲ್ಲಿ ನಿಯಾಮಾನುಸಾರ ನಿರ್ದಾಕ್ಷಿಣ್ಯವಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಮಿತಿಯ ಹಿರಿಯ ಭೂ ವಿಜ್ಞಾನಿ ಹಾಗೂ ಸದಸ್ಯ ಕಾರ್ಯದರ್ಶಿ ತಿಳಿಸಿದೆ.