ಉಡುಪಿ, ಅ 25 (DaijiworldNews/SM): ಕ್ಯಾರ್ ಚಂಡಮಾರುತದ ಪ್ರಭಾವದಿಂದ ಕರಾವಳಿ ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿದ್ದು, ಅ. 26ರಂದು ಉಡುಪಿ ಜಿಲ್ಲೆಯ ಪ್ರಾಥಮಿಕ - ಪ್ರೌಢಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಭಾರೀ ಮಳೆ ಹಿನ್ನೆಲೆಯಲ್ಲಿ ಶುಕ್ರವಾರದಂದು ಮುನ್ನೆಚ್ಚರಿಕಾ ಕ್ರಮವಾಗಿರಜೆ ಘೋಷಿಸಲಾಗಿತ್ತು. ಇದೀಗ ಮಳೆ ಮುಂದುವರೆದ ಪರಿಣಾಮ ಶನಿವಾರವೂ ಎಚ್ಚರಿಕಾ ಕ್ರಮವಾಗಿ ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ