ಕಾಸರಗೋಡು, ಅ 27 (DaijiworldNews/SM): ಮಂಜೇಶ್ವರದ ನೂತನ ಶಾಸಕ ಎಂ.ಸಿ. ಖಮರುದ್ದೀನ್ ಅಕ್ಟೋಬರ್ 28ರಂದು ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಸೋಮವಾರ ಬೆಳಿಗ್ಗೆ ಹತ್ತು ಗಂಟೆಗೆ ಕೇರಳ ರಾಜ್ ಭವನದಲ್ಲಿ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಖಮರುದ್ದೀನ್ ಮೊದಲ ಬಾರಿಗೆ ವಿಧಾನಸಭೆಗೆ ಪ್ರವೇಶಿಸಲಿದ್ದಾರೆ.
ಇನ್ನು 2016ರ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದ ಪಿ.ಬಿ. ಅಬ್ದುಲ್ ರಜಾಕ್ ರವರ ನಿಧನದ ಹಿನ್ನಲೆಯಲ್ಲಿ ಅಕ್ಟೋಬರ್ 21 ರಂದು ಮಂಜೇಶ್ವರ ವಿಧಾನಸಭೆಗೆ ಉಪ ಚುನಾವಣೆ ನಡೆಸಿತ್ತು. ಅಕ್ಟೋಬರ್ 24ರಂದು ನಡೆದ ಮತ ಎಣಿಕೆ ಸಂದರ್ಭ 7923 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ರವೀಶ್ ತಂತ್ರಿ ವಿರುದ್ಧ ಖಮರುದ್ದಿನ್ ಗೆಲುವು ಸಾಧಿಸುವ ಮೂಲಕ ಶಾಸಕರಾಗಿ ಆಯ್ಕೆಯಾಗಿದ್ದಾರೆ.