ತಿರುವನಂತಪುರ, ಅ 28 (DaijiworldNews/SM): ಇತ್ತೀಚಿಗೆ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಖಮರುದ್ದೀನ್ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ತಿರುವನಂತಪುರದ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಅವರು ಮೊದಲ ಬಾರಿಗೆ ಶಾಸಕರಾಗಿ ಪ್ರಮಾಣ ಸ್ವೀಕರಿಸಿದರು.
ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಖಮರುದ್ದೀನ್ ಗಮನ ಸೆಳೆದರು. ಈ ಸಂದರ್ಭದಲ್ಲಿ ಖಮರುದ್ದೀನ್ ಅವರ ಪತ್ನಿ, ಮಕ್ಕಳು ಹಾಗೂ ಕುಟುಂಬಸ್ಥರು, ಯುಡಿಎಫ್ ನ ಮುಖಂಡರು ಉಪಸ್ಥಿತರಿದ್ದರು.
ಮಂಜೇಶ್ವರ ಕ್ಷೆತ್ರದಲ್ಲಿ ಶಾಸಕರಾಗಿದ್ದ ಪಿ.ಬಿ ಅಬ್ದುಲ್ ರಜಾಕ್ ರವರ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ಅಕ್ಟೋಬರ್ 21 ರಂದು ಚುನಾವಣೆ ನಡೆದಿತ್ತು. ಉಪಚುನಾವಣೆಯಲ್ಲಿ 7923 ಮತಗಳ ಅಂತರದಿಂದ ಎಂ.ಸಿ ಖಮರುದ್ದೀನ್ ಭಾರಿ ಗೆಲುವು ಸಾಧಿಸಿದ್ದರು.