ಮಂಗಳೂರು, ಜ 9: ಬಜ್ಪೆ ಪೊಲೀಸ್ ಸ್ಟೇಷನ್ ನಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮದನ್ ತಮ್ಮ ವೃತ್ತಿಗೆ ವಿದಾಯ ಹೇಳಲಿದ್ದಾರೆ.
ಪೊಲೀಸ್ ವೃತ್ತಿಗೆ ಗುಡ್ ಬೈ ಹೇಳಲಿರುವ ಮದನ್ ಭಾರತೀಯ ಜತಾ ಪಕ್ಷ ಸೇರಲಿದ್ದು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕರಾವಳಿ ಭಾಗದಿಂದ ಬಿಜೆಪಿ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಈಗಾಗಲೇ ಅನೇಕ ಸಂಘ ಸಂಸ್ಥೆಗಳೊಂದಿಗೆ ಮಾತುಕತೆ ನಡೆಸಿರುವ ಮದನ್ ಈ ಕುರಿತು ತಮ್ಮ ಆಪ್ತ ವಲಯದಲ್ಲಿಯೂ ಚರ್ಚೆ ನಡೆಸಿದ್ದಾರೆ.
ಸರಳ ವ್ಯಕ್ತಿತ್ವದ ಮದನ್ ಅನೇಕ ಅನೇಕ ಸಾಮಾಜಿಕ ಕಾರ್ಯಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು, ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ಜವಾಬ್ದಾರಿಯುತವಾಗಿ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದು, ತನ್ನ ಎಲ್ಲಾ ಕೆಲಸವನ್ನು ಯಶಸ್ವಿಯಾಗಿ ನಿರ್ವಹಿಸಿದ ಹೆಗ್ಗಳಿಕೆ ಇವರಿಗಿದೆ.