ಚಾಮರಾಜನಗರ, ಜ 10: ಬಿಜೆಪಿ, ಆರ್.ಎಸ್.ಎಸ್, ಬಜರಂಗದಳದವರು ಉಗ್ರಗಾಮಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಕಿಡಿ ಹೊತ್ತಿಸಿದ್ದಾರೆ.
ಚಾಮರಾಜನಗರದ ನಾಗವಳ್ಳಿ ಹೆಲಿಪ್ಯಾಡ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಸರಿ ಪಡೆಯ ಸಂಘಟನೆಯ ಯಾವುದೇ ನಾಯಕರಿಗೆ ನಮ್ಮ ಪಕ್ಷದ ಬಗ್ಗೆ ಮಾತನಾಡುವ ನೈತಿಕ ಹಕ್ಕು ಇಲ್ಲ. ಆರ್ ಎಸ್ಎಸ್, ಪಿಎಫ್ಐ ಯಾವುದೇ ಸಂಘಟನೆ ಇರಲಿ, ಇದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದರು.
ರುದ್ರೇಶ್ ಹತ್ಯೆ ಪ್ರಕರಣದಲ್ಲಿ, ಪಿಎಫ್ಐ ಸಂಘಟನೆಯ ಸದಸ್ಯರ ಹೆಸರನ್ನು ಉಲ್ಲೇಖಿಸಿದೆ. ಹೀಗಾಗಿ ಪಿ ಎಫ್ ಐ ಸಂಘಟನೆಯನ್ನು ನಿಷೇಧಿಸುತ್ತೀರಾ ಎಂಬ ಪ್ರಶ್ನೆಯನ್ನು ವರದಿಗಾರರು ಕೇಳಿದ್ದರು. ಈ ಪ್ರಶ್ನೆಗೆ ಉತ್ತರಿಸುವ ಭರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಿಜೆಪಿ, ಆರ್ ಎಸ್ ಎಸ್, ಬಜರಂಗದಳದವರು ಕೂಡಾ ಒಂಥರ ಉಗ್ರಗಾಮಿಗಳೇ ಎಂದು ಹೇಳಿದ್ದಾರೆ.