ಬೆಳ್ತಂಗಡಿ, ನ 11 (DaijiworldNews/SM): ಶಂಕಿತ ಡೆಂಗ್ಯೂ ಜ್ವರಕ್ಕೆ ವ್ಯಕ್ತಿಯೊಬ್ಬರು ಬಲಿಯಾಗಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿಯ ಬೆಳಾಲು ಗ್ರಾಮದ ಮಾಚಾರಿನ ದಿನೇಶ್(35) ಮೃತಪಟ್ಟ ಯುವಕರಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ದಿನೇಶ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಇನ್ನು ಕೆಲವು ದಿನಗಳ ಹಿಂದೆ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂಧಿಸದ ಹಿನ್ನೆಲೆಯಲ್ಲಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸುವಂತೆ ಅಲ್ಲಿನ ವೈದ್ಯರು ತಿಳಿಸಿದ್ದರು. ಅದರಂತೆ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ.