ಮಂಗಳೂರು, ನ.12(Daijiworld News/SS): ಮಂಗಳೂರು ಮಹಾನಗರ ಪಾಲಿಕೆಗೆ ಚುನಾವಣೆ ನಡೆಯುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ ಚಲಾಯಿಸಿದರು.
ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆ, ಇಂದು ಪಾಲಿಕೆಯ 60 ವಾರ್ಡ್ಗಳಿಗೆ ಮತದಾನ ನಡೆಯಲಿದೆ. ಈ ಹಿನ್ನೆಲೆ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಮ್ಮ ಹಕ್ಕು ಚಲಾಯಿಸಿದ್ದಾರೆ.
ಕಾಂಗ್ರೆಸ್ ಮತ್ತು ಬಿಜೆಪಿ ಎಲ್ಲ 60 ವಾರ್ಡ್'ಗಳಿಗೂ ಅಭ್ಯರ್ಥಿ ನಿಲ್ಲಿಸಿದ್ದು, ನೇರಾನೇರ ಸ್ಪರ್ಧೆ ಇದೆ. ಜೆಡಿಎಸ್ ಈ ಬಾರಿ 12 ಸ್ಥಾನಗಳಿಗೆ ಸ್ಪರ್ಧಿಸಿದ್ದು, ಕನಿಷ್ಠ ಐದು ಸ್ಥಾನ ಗೆದ್ದರೂ ಕಿಂಗ್ ಮೇಕರ್ ಆಗುವ ಸಾಧ್ಯತೆಯಿದೆ. ಇದಲ್ಲದೆ, ಎಸ್ ಡಿಪಿಐ ಆರು ಸ್ಥಾನ ಮತ್ತು ಸಿಪಿಐಎಂ ಏಳು ಸ್ಥಾನಗಳಲ್ಲಿ ಸ್ಪರ್ಧೆ ಒಡ್ಡಿದೆ. 27 ಮಂದಿ ಪಕ್ಷೇತರರು ಸೇರಿ ಒಟ್ಟು 180 ಮಂದಿ ಕಣದಲ್ಲಿದ್ದಾರೆ. ಒಟ್ಟು 448 ಮತಗಟ್ಟೆಗಳಿದ್ದು, 3,87,517 ಮತದಾರರು ಮತ ಚಲಾಯಿಸಲಿದ್ದಾರೆ. ಹೀಗಾಗಿ ಮಂಗಳೂರು ನಗರ ಭಾಗದ ಜನ ಯಾರನ್ನು ಅಧಿಕಾರಕ್ಕೇರಿಸಲಿದ್ದಾರೆ ಅನ್ನುವುದು ಕಾದು ನೋಡಬೇಕು.