ಕಾಸರಗೋಡು, ನ 13 (DaijiworldNews/SM): ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಪಟ್ಟಂತೆ ಮರು ಪರಿಶೀಲನಾ ಅರ್ಜಿಯ ತೀರ್ಪು ನವಂಬರ್ ೧೪ರ ಗುರುವಾರ ತೀರ್ಪು ಪ್ರಕಟಗೊಳ್ಳಲಿದೆ.
ಶಬರಿಮಲೆಯ ಮಹತ್ವದ ತೀರ್ಪಿನ ಹಿನ್ನೆಲೆ ಕಾಸರಗೋಡು ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಸೂಕ್ಷ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಹಾಗೂ ಜಿಲ್ಲೆಯಾದ್ಯಂತ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಡಿ. ಸಜಿತ್ ಬಾಬು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜೇಮ್ಸ್ ಜೋಸೆಫ್ ತಿಳಿಸಿದ್ದಾರೆ.
ಭದ್ರತೆ ಕುರಿತು ಅವಲೋಕನ ನಡೆಸಲು ಬುಧವಾರ ರಾತ್ರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ಸೇರಿ ಅಗತ್ಯ ಕ್ರಮ ತೆಗೆದುಕೊಳ್ಳಲು ತೀರ್ಮಾನ ಕೈಗೊಳ್ಳಲಗಿದೆ.ಸಾಮಾಜಿಕ ಜಾಲ ತಾಣಗಳ ಬಗ್ಗೆಯೂ ನಿಗಾ ಇರಿಸಲಾಗಿದೆ.
ಜಿಲ್ಲೆಯ 35 ಸೂಕ್ಷ್ಮ ಸ್ಥಳಗಳಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. 40 ಮೊಬೈಲ್ ಪೆಟ್ರೋಲಿಂಗ್ ಘಟಕ, 28 ಬೈಕ್ ಪೆಟ್ರೋಲಿಂಗ್ ಸಜ್ಜುಗೊಳಿಸಲಾಗಿದೆ. ಗುರುವಾರ ಮಧ್ಯಾಹ್ನ 12 ಗಂಟೆಗೆ ಭದ್ರತೆ ಅವಲೋಕನಕ್ಕಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಯಲಿದೆ ಎಂದು ತಿಳಿದು ಬಂದಿದೆ.