ಕುಂದಾಪುರ, ನ 14 (Daijiworld News/MSP): ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಡಿವೈಡರ್ಗೆ ಡಿಕ್ಕಿ ಹೊಡೆದ ಬೆನ್ನಿಗೇ ಟಿಪ್ಪರ್ ಒಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ನುಜ್ಜುಗುಜ್ಜಾದ ಘಟನೆ ಕುಂಭಾಸಿ ಸಮೀಪದ ಕೆ.ಕೆ. ಮಾರ್ಬಲ್ ಎದುರುಗಡೆ ಗುರವಾರ ಮಧ್ಯಾಹ್ನ ನಡೆದಿದೆ.
ಕುಂಭಾಸಿ ಕಡೆಯಿಂದ ಬರುತ್ತಿದ್ದ ಕಾರು ಹೆದ್ದಾರಿ ಮಧ್ಯದಲ್ಲಿ ಬರುತ್ತಿದ್ದಂತೆ ನಿಯಂತ್ರಣ ಕಳೆದುಕೊಂಡು ಡಿವೈಡರ್ಗೆ ಡಿಕ್ಕಿ ಹೊಡೆದು ಹೆದ್ದಿಗೆ ಅಡ್ಡವಾಗಿ ನಿಂತುಬಿಟ್ಟಿತ್ತು. ಇದೇ ಸಂದರ್ಭ ಹಿಂದುಗಡೆಯಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದಿದೆ. ಎನ್ನಲಾಗಿದೆ. ಘಟನೆಯಿಂದ ಸುಮಾರು ಅರ್ಧ ತಾಸು ಸಂಚಾರ ವ್ಯತ್ಯಯವಾಗಿತ್ತು. ಆದರೆ ಚಾಲಕರಿಗೆ ಇಬ್ಬರಿಗೂ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದು ಬಂದಿದೆ.