ಮಂಗಳೂರು, ಜ 13: ಉಳ್ಳಾಲ ಟಾರ್ಗೆಟ್ ಗ್ರೂಪ್ನಲ್ಲಿ ಕುಖ್ಯಾತ ರೌಡಿಯಾಗಿದ್ದ ಇಲ್ಯಾಸ್ನನ್ನು ಜೆಪ್ಪು ಕುಡ್ಪಾಡಿಯ ಬಳಿ ಇಬ್ಬರು ದುಷ್ಕರ್ಮಿಗಳು ಸೇರಿಕೊಂಡು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ.
ಇಲ್ಯಾಸ್ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ. ಇದೀಗ ದುಷ್ಕರ್ಮಿಗಳು ಭೀಕರವಾಗಿ ಆತನ ಎದೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ವಿರೋಧಿ ಗುಂಪಿನ ರೌಡಿಗಳು ಕೊಲೆ ಮಾಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಕಳೆದ ಕೆಲ ದಿನಗಳ ಹಿಂದೆ ಸಚಿವ ಯು.ಟಿ.ಖಾದರ್ ಮತ್ತು ಶಾಸಕ ಬಿ.ಎ.ಮೊಯಿದ್ದೀನ್ ಅವರ ಜೊತೆ ಈತ ಇದ್ದ ಚಿತ್ರಗಳು ಭಾರಿ ಸದ್ದು ಮಾಡಿದ್ದವು. ಮೃತದೇಹವನ್ನು ಫ್ಲ್ಯಾಟ್ನಿಂದ ಕಂಕನಾಡಿ ಫಾದರ್ ಮುಲ್ಲರ್ಸ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ ಎಂದು ಡಿಸಿಪಿ ಹನುಮಂತರಾಯ ತಿಳಿಸಿದ್ದಾರೆ.
ಉಳ್ಳಾಲ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಆಗಿದ್ದ ಇಲ್ಯಾಸ್, ಕೊಲೆ, ಅತ್ಯಾಚಾರ, ಅಪಹರಣದಂತಹ ಕೃತ್ಯ ಎಸಗುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.