ಮಲ್ಪೆ, ನ 24(DaijiworldNews/SM): ಮೀನುಗಾರಿಕಾ ಬೋಟ್ ವೊಂದು ಸಮುದ್ರದ ಮಧ್ಯೆ ಸಿಲುಕಿಕೊಂಡ ಘಟನೆ ಮಲ್ಪೆಯಲ್ಲಿ ನಡೆದಿದ್ದು, ನಾಲ್ವರು ಮೀನುಗಾರರನ್ನು ರಕ್ಷಿಸಲಾಗಿದೆ. ಕರಾವಳಿ ಕಾವಲು ಪಡೆಯ ಸಿಬ್ಬಂದಿಗಳು ಮಿಂಚಿನ ಕಾರ್ಯಾಚರಣೆ ನಡೆಸಿ ಮೀನುಗಾರರನ್ನು ರಕ್ಷಿಸಿದ್ದಾರೆ.
ಭಟ್ಕಳದ ಕರಾವಳಿ ಕಾವಲು ಪಡೆ ಪೊಲೀಸ್ ಠಾಣೆ ವ್ಯಾಪ್ತಿಯ ನೇತ್ರಾಣಿ ದ್ವೀಪದಿಂದ ಸುಮಾರು ಎರಡು ನಾಟಿಕಲ್ ಮೈಲ್ ದೂರದಲ್ಲಿ ಈ ಅವಘಡ ಸಂಭವಿಸಿದೆ. ಮೀನುಗಾರಿಕಾ ಬೋಟ್ ನ ಡೀಸೆಲ್ ಟ್ಯಾಂಕ್ ಬಿದ್ದ ಪರಿಣಾಮ ಬೋಟಿನೊಳಗೆ ನೀರು ನುಗ್ಗಿ ಬೋಟ್ ಸಮುದ್ರದಲ್ಲಿ ಮುಳುಗಿದೆ ಎಂದು ತಿಳಿದುಬಂದಿದೆ.
ಇನ್ನು ಮಾಹಿತಿ ದೊರೆತ ತಕ್ಷಣ ಸ್ಥಳಕ್ಕೆ ದೌಡಾಯಿಸಿದ ರಕ್ಷಣಾ ಪಡೆ ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.