ನೆಟ್ಟಣ, ನ 26 (Daijiworld News/MSP): ರೈಲಿನಡಿಗೆ ತಲೆಯಿಟ್ಟು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಟ್ಟಣದ ರೈಲ್ವೇ ನಿಲ್ದಾಣದ ಬಳಿ ನಡೆದಿದೆ.
ನ.೨೬ ರ ಸೋಮವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು, ವ್ಯಕ್ತಿಯೊಬ್ಬರು ನಡೆದುಕೊಂಡು ಹೋಗುತ್ತಿದ್ದ ವೇಳೆ ಮೃತದೇಹ ನೋಡಿ ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ.
ಮೃತದೇಹದ ಬಳಿ ಬ್ಯಾಂಕ್ ಪಾಸ್ ಪುಸ್ತಕವೊಂದು ದೊರೆತಿದ್ದು, ಅದರಲ್ಲಿ ಉಳ್ಳಾಲ ರೈಲ್ವೇ ನಿಲ್ದಾಣ ಬಳಿಯ ನಿವಾಸಿ ಪವನ್ ಕುಮಾರ್ ಎಂಬ ವಿಳಾಸ ಪತ್ತೆಯಾಗಿದೆ. ಹೆಚ್ಚಿನ ತನಿಖೆಯ ಬಳಿಕವಷ್ಟೇ ಮಾಹಿತಿ ತಿಳಿದುಬರಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.