ಪೂಂಚ್, ಜ 15: ಪಾಕಿಸ್ತಾನದ ಸೈನಿಕರು ಕದನ ವಿರಾಮ ಉಲ್ಲಂಘಿಸಿ ಭಾರತೀಯ ಸೇನಾ ಮೇಲೆ ಗುಂಡಿನ ದಾಳಿ ನಡೆಸಿದ್ದು ಇದಕ್ಕೆ ಭಾರತೀಯ ಸೇನೆ ನಡೆಸಿದ ಪ್ರತೀಕಾರದ ದಾಳಿಯಲ್ಲಿ 7 ಪಾಕ್ ಸೈನಿಕರನ್ನು ಹತ್ಯೆಗೈದಿದ್ದಾರೆ. ಅಂತಾರಾಷ್ಟ್ರೀಯ ಗಡಿ ರೇಖೆ ಪೂಂಚ್ ಜಿಲ್ಲೆಯ ಮೇಧಾರ್ ಸೆಕ್ಟರ್ ನ ಕೋಟ್ಲಿ ಪ್ರದೇಶದಲ್ಲಿ ಪಾಕಿಸ್ತಾನ ಸೈನಿಕರು ಗುಂಡಿನ ದಾಳಿ ನಡೆಸಿದ್ದರು. ಇದಕ್ಕೆ ಉತ್ತರಿಸಿದ ಭಾರತೀಯ ಸೇನೆ ಸಹ ಗುಂಡಿನ ದಾಳಿ ಮಾಡಿದೆ. ಪರಿಣಾಮ ಇದರಲ್ಲಿ ಪಾಕಿಸ್ತಾನದ ನಾಲ್ಕು ಸೇನಾ ಪೋಸ್ಟ್ ಗಳು ಧ್ವಂಸವಾಗಿವೆ. ಇನ್ನು ಏಳು ಸೈನಿಕರು ಹತ್ಯೆಯಾಗಿದ್ದು ನಾಲ್ವರು ಗಾಯಗೊಂಡಿದ್ದಾರೆ. ಇವತ್ತು 70ನೇ ಸೇನಾ ದಿನ ಸಂಭ್ರಮಾಚರಣೆಯಲ್ಲಿ ಭಾರತೀಯರು ತೊಡಗಿಸಿಕೊಂಡಿದ್ದಾರೆ. ಇದೇ ವೇಳೇ ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನದ ಸೈನಿಕರಿಗೂ ಭಾರತೀಯ ಸೈನಿಕರು ತಕ್ಕ ಪಾಠ ಕಲಿಸಿದ್ದಾರೆ.