ಪುತ್ತೂರು, ನ 28 (DaijiworldNews/SM): ಸಹಪಾಠಿ ವಿದ್ಯಾರ್ಥಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಆರೋಪಿಗಳ ಪೈಕಿ ಓರ್ವನಿಗೆ ಜಾಮೀನು ಮಂಜೂರಾಗಿದೆ. ಬಂಟ್ವಾಳ ಬರಿಮಾರು ಗ್ರಾಮದ ಪ್ರಖ್ಯಾತ್ (19) ಎಂಬಾತನಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಆರೋಪಿ ಪ್ರಖ್ಯಾತ್ ಪರ ಹೈಕೋರ್ಟ್ ನಲ್ಲಿ ವಕೀಲರಾದ ಅರುಣ್ ಶ್ಯಾಮ್ ಪುತ್ತೂರು ಮತ್ತು ಮಹೇಶ್ ಕಜೆ ವಾದಿಸಿದ್ದು, ಆರೋಪಿಗೆ ಜಾಮೀನು ಮಂಜಾರಾಗಿದೆ.
ಉಳಿದ ನಾಲ್ವರು ವಿದ್ಯಾರ್ಥಿಗಳ ಜಾಮೀನು ಅರ್ಜಿಯ ವಿಚಾರಣೆ ಮುಂದಿನ ವಾರ ಹೈಕೋರ್ಟ್ ನಲ್ಲಿ ನಡೆಯಲಿದೆ.
ಇನ್ನು ಪುತ್ತೂರು ಖಾಸಗಿ ಕಾಲೇಜೊಂದರ ವಿದ್ಯಾರ್ಥಿನಿ ಮೇಲೆ ಐವರು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಬಳಿಕ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಪ್ರಕರಣದ ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರಿಂದ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿರುವ ಐವರು ವಿದ್ಯಾರ್ಥಿಗಳ ಪೈಕಿ ಓರ್ವನಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ ಎಂದು ತಿಳಿದುಬಂದಿದೆ.
ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳಾದ ಬಜತ್ತೂರು ಗ್ರಾಮದ ಗಾಣದಮೂಲೆ ನಿವಾಸಿ ಗುರುನಂದನ್ (19), ಪೆರ್ನೆ ನಿವಾಸಿ ಪ್ರಜ್ವಲ್ (19), ಪೆರ್ನೆ ಕಡಂಬು ನಿವಾಸಿ ಕಿಶನ್ (19), ಆರ್ಯಾಪು ಗ್ರಾಮದ ಪಿಲಿಗುಂಡ ನಿವಾಸಿ ಸುನಿಲ್ (19) ಬಂಟ್ವಾಳ ಬರಿಮಾರು ಗ್ರಾಮದ ಪ್ರಖ್ಯಾತ್ (19) ಎಂಬವರನ್ನು ಪೊಲೀಸರು ಬಂಧಿಸಿದ್ದರು.