ಬಂಟ್ವಾಳ, ಜ. 15: ವಾಟ್ಸಾಪ್ ಗ್ರೂಪ್ನಲ್ಲಿ ವ್ಯಕ್ತಿಯೊಬ್ಬರು ಧರ್ಮನಿಂದನೆಯ ಪೋಸ್ಟ್ ಹಾಕಿದ್ದಾರೆ ಎಂಬ ಆರೋಪದಡಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಂಟ್ವಾಳ ಪುರಸಭಾ ಸದಸ್ಯ ಮುನೀಶ್ ಅಲಿ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು, ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿರುವವರ ಮೇಲೆ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಿದ್ದಾರೆ. "ಮೀಡಿಯಾ ಆಂಡ್ ರೈಸರ್" ಎಂಬ ವಾಟ್ಸ್ಆಪ್ ಗ್ರೂಪಿನಲ್ಲಿ ಇಸ್ಲಾಂ ಧರ್ಮದ ಬಗ್ಗೆ ಅವಹೇಳಕಾರಿಯಾದ ಬರಹಗಳನ್ನು ಹಾಕುವ ಮೂಲಕ ಧರ್ಮನಿಂದನೆ ಮಾಡಿದ್ದಾರೆ. ಇದರಿಂದ ಮುಸ್ಲಿಮರ ಭಾವನೆಗೆ ಧಕ್ಕೆ ಉಂಟಾಗಿದೆ. ಈ ಸಂದೇಶವು ಮುಸ್ಲಿಮರ ಬಗ್ಗೆ ಸಮಾಜಕ್ಕೆ ತಪ್ಪು ಕಲ್ಪನೆ ನೀಡಿದಂತಾಗಿದೆ.
ಆದರಿಂದ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳಕಾರಿಯಾದ ಹೇಳಿಕೆಗಳನ್ನು ಹಾಕುವ ಮೂಲಕ ಸಮಾಜದಲ್ಲಿ ಅಶಾಂತಿಯನ್ನು ಸೃಷ್ಠಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸಬೇಕೆಂದು ಅವರು ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.ಈ ಸಂಬಂಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.