ಬಂಟ್ವಾಳ, ನ.30(Daijiworld News/SS): ಬಂಟ್ವಾಳದ ಇರಾ ಗ್ರಾಮ ಪಂಚಾಯತ್ ಅಧ್ಯಕ್ಷರ ಮೇಲೆ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಘಟನೆ ನಡೆದಿದೆ.
ಬಂಟ್ವಾಳ ತಾಲೂಕಿನ ಮಂಚಿ ಎಂಬಲ್ಲಿ ಈ ಘಟನೆ ನಡೆದಿದ್ದು, ರಝಾಕ್ ಕುಕ್ಕಾಜೆ ಕಿಡಿಗೇಡಿಗಳ ದಾಳಿಯಿಂದ ಹಲ್ಲೆಗೊಳಗಾದವರು ಎಂದು ತಿಳಿದುಬಂದಿದೆ.
ಗ್ರಾಮ ಪಂಚಾಯತ್ ಅಧ್ಯಕ್ಷ ರಝಾಕ್ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ, ಮಂಚಿ ಗ್ರಾಮದ ಮಂಚಿ ಕಟ್ಟೆಯಲ್ಲಿರುವ ಕ್ಲಿನಿಕ್'ವೊಂದಕ್ಕೆ ಇಂದು ರಾತ್ರಿ ಬಂದಿದ್ದರು ಎನ್ನಲಾಗಿದೆ. ಈ ವೇಳೆ ಏಕಾಏಕಿ ಬೈಕ್'ನಲ್ಲಿ ಬಂದ ತಂಡ ರಝಾಕ್ ಅವರಿಗೆ ಹಲ್ಲೆ ನಡೆಸಿ ಪರಾರಿಯಾಗಿದೆ ಎನ್ನಲಾಗಿದೆ.
ಸದ್ಯ ರಝಾಕ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತನಿಖೆ ಪ್ರಗತಿಯಲ್ಲಿದೆ.