ಉಪ್ಪಿನಂಗಡಿ, ಡಿ 06 (Daijiworld News/MB) : ಕಾಲೇಜು ವಿದ್ಯಾರ್ಥಿ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿದ ಘಟನೆ ಶುಕ್ರವಾರ ಬೆಳಿಗ್ಗೆ ತೆಕ್ಕಾರು ಎಂಬಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿ ಪ್ರಥಮ್ ಕೊಂಡೆ (19) ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಮರಮೆ ಮನೆ ನಿವಾಸಿಯಾಗಿದ್ದು ಉಪ್ಪಿನಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಬಿ.ಎ ವ್ಯಾಸಂಗ ಮಾಡುತ್ತಿದ್ದರು.
ಗುರುವಾರ ರಾತ್ರಿ ಮನೆಯಲ್ಲಯೇ ಇದ್ದ ಇವರು ಮನೆಯ ಬಳಿಯ ಮಾವಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಬೆಳಗ್ಗಿನ ಜಾವ ಕಂಡುಬಂದಿದ್ದಾರೆ.
ಈ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.