ಉಳ್ಳಾಲ, ಡಿ 07 (DaijiworldNews/SM): ಇಲಿ ಜ್ವರಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.
ಉಳ್ಳಾಲದ ಕುತ್ತಾರಿನ ತೇವುಲ ನಿವಾಸಿ ಮನೋಜ್ ಕುಮಾರ್(28) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಇವರು ಕಳೆದ ಕೆಲವು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದರು. ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಗುಣಮುಖರಾಗದ ಹಿನ್ನೆಲೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಅವರನ್ನು ದಾಖಲಿಸಲಾಗಿತ್ತು. ಆದರೆ, ಅಲ್ಲೂ ಕೂಡ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.