ನೆಲ್ಯಾಡಿ, ಡಿ 12 (DaijiworldNews/SM): ಇಲ್ಲಿನ ಶಿಬಾಜೆ ಎಂಬಲ್ಲಿ ಶಾಲಾ ಬಾವಿಗೆ ವಿಷ ಬೆರೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಆರೋಪಿಗಳನ್ನು ಬಂಧಿಸಿಲ್ಲ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಆಕ್ರೋಶಗೊಂಡಿದ್ದಾರೆ.
ಪ್ರಕರಣದ ಕುರಿತಂತೆ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಹಾಗೂ ಡಿಸೆಂಬರ್ ೧೩ರಂದು ಶಾಲಾ ವಠಾರದಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.
ಪ್ರಕರಣ ನಡೆದು ಒಂದು ವಾರ ಕಳೆದರೂ ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿಲ್ಲ. ಈ ಪ್ರಕರಣದಲ್ಲಿ ಆರೋಪಿಗಳ ಬಂಧನದಲ್ಲಿ ಹಾಗೂ ತನಿಖೆ ನಡೆಸುವಲ್ಲಿ ವಿಳಂಬ ನೀತಿ ಅನುಸುತ್ತಿದ್ದಾರೆ ಎಂದು ಆರೋಪಿಸಿರುವ ಸ್ಥಳೀಯರು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.
ಇನ್ನು ವಾರದ ಹಿಂದೆ ಕಿಡಿಗೇಡಿಗಳು ಶಾಲಾ ವಠಾರದಲ್ಲಿರುವ ಕುಡಿಯುವ ನೀರಿನ ಬಾವಿಗೆ ವಿಷ ಬೆರೆಸಿದ್ದರು. ಪರಿಣಾಮವಾಗಿ ಬಾವಿಯ ನೀರು ಸೇವಿಸಿದ ಸುಮಾರು ಹತ್ತಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದರು. ಘಟನಾ ಸ್ಥಳದಲ್ಲಿ ವಿಷದ ಬಾಟಲ್ ಗಳು ಪತ್ತೆಯಾಗಿದ್ದವು.