ಬಂಟ್ವಾಳ, ಡಿ 09 (DaijiworldNews/SM): ಅನುಮಾನಾಸ್ಪದವಾಗಿ ತಿರುಗುತ್ತಿದ್ದ ವ್ಯಕ್ತಿಯೋರ್ವನನ್ನು ಹಿಡಿದು ಸ್ಥಳಿಯರು ಪೊಲೀಸರಿಗೊಪ್ಪಿಸಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ.
ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಪಿಲಿಮೊಗರು ಎಂಬಲ್ಲಿ ವ್ಯಕ್ತಿ ಅನುಮಾನಾಸ್ಪದವಾಗು ತಿರುಗುತ್ತಿದ್ದ. ಇದರಿಂದ ಸಂಶಯಗೊಂಡ ಸ್ಥಳೀಯರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಬಳಿಕ ಪೊಲೀಸರು ಆ ವ್ಯಕ್ತಿಯನ್ನು ವಿಚಾರಣೆ ನಡೆಸಿದ್ದು, ಅವರು ರಮಣನ್ ಎಂದು ತಿಳಿದುಬಂದಿದೆ. ಇವರು ಮಾಜಿ ಸೈನಿಕರಾಗಿದ್ದು, ಮಾನಸಿಕವಾಗಿ ನೊಂದುಕೊಂಡಿದ್ದರು ಎಂದು ತಿಳಿದುಬಂದಿದೆ. ಇನ್ನು ಇವರು ಎನ್ ಎಂಪಿಟಿ ಕಾಲನಿಯಿಂದ ನಾಪತ್ತೆಯಾಗಿರುವ ಬಗ್ಗೆ ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಪಣಂಬೂರು ಠಾಣಾ ಪೊಲೀಸರಿಗೆ ಒಪ್ಪಿಸಲಾಗಿದೆ.