ಮಂಗಳೂರು, ಡಿ 16 (DaijiworldNews/SM): ಪೊಲೀಸ್ ಇಲಾಖೆ ಅನುಮತಿಸದೆ ಸಿಎಫ್ ಐ ಕಾರ್ಯಕರ್ತರು ಡಿಸೆಂಬರ್ 16ರಂದು ಮಂಗಳೂರಿನ ಜ್ಯೋತಿ ವೃತ್ತದಿಂದ ಬಲ್ಮಠ ರಸ್ತೆಯನ್ನು ತಡೆಯಲು ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಿತದೃಷ್ಟಿಯಲ್ಲಿ 38 ಮಂದಿ ಕಾರ್ಯಕರ್ತರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಮುನ್ನಡೆಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಡಾ. ಹರ್ಷಾ ತಿಳಿಸಿದ್ದಾರೆ.









ಸಾರ್ವಜನಿಕ ಶಾಂತಿ ಸುವ್ಯವಸ್ಥೆಗೆ ಧಕ್ಕೆಯನ್ನು ಮಾಡಿದ ಹಿನ್ನೆಲೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರ ವಿರುದ್ಧ ಪೊಲೀಸರು ಕ್ರಮಕೈಗೊಂಡಿದ್ದಾರೆ. ಪೊಲೀಸ್ ಇಲಾಖೆಯ ಸ್ಪಷ್ಟ ಸೂಚನೆಯ ಹೊರತಾಗಿಯೂ ಆದೇಶವನ್ನು ಉಲ್ಲಂಘಿಸಿ ಧರಣಿ ನಡೆಸಲಾಗಿದೆ. ಆ ಮೂಲಕ ಪೊಲೀಸರ ಕರ್ತವ್ಯಕ್ಕೂ ಅಡ್ಡಿಪಡಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯನ್ನು ಮನಗಂಡು ರಸ್ತೆ ತಡೆಗೆ ಮುಂದಾದ ಸುಮಾರು 38 ಮಂದಿ ಸಿಎಫ್ ಐ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಪ್ರಸ್ತುತ ಪರಿಸ್ಥಿತಿ ಶಾಂತಿಯುತವಾಗಿದೆ ಎಂದು ಕಮಿಷನರ್ ತಮ್ಮ ಪ್ರಕಟನೆಯಲ್ಲಿ ತಿಳಿಸಿದ್ದಾರೆ.