ಉಡುಪಿ, ಡಿ 18(Daijiworld News/MB) : ಡಾನ್ ಬಾಸ್ಕೋ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲ ಫಾ. ಮಹೇಶ್ ಡಿಸೋಜಾ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟತೆ, ’ಮುದರಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಡೇವಿಡ್ ಡಿಸೋಜಾ ಅವರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶ ಹರಡಿದ ಹಿನ್ನಲೆಯಲ್ಲಿ ಕುತ್ಯಾರ್ ನಿವಾಸಿ ಜೋಯಲ್ ಮಥಿಯಾಸ್ ಮತ್ತು ಪಿಲಾರ್ ನಿವಾಸಿ ಫ್ಲೇವಿಯಾ ಮಥಿಯಾಸ್ ಅವರ ಮೇಲೆ ಎಫ್ಐಆರ್ ದಾಖಲು ಮಾಡುವಂತೆ ಉಡುಪಿಯ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಪೊಲೀಸರಿಗೆ ಆದೇಶ ನೀಡಿದೆ.
ಈ ಪ್ರಕರಣಕ್ಕೆ ಸಂಬಂಧಿಸಿ ಶಿರ್ವಾ ಪೊಲೀಸ್ ಠಾಣೆಯ ಪೊಲೀಸರು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ. "ಫಾ. ಮಹೇಶ್ ಡಿಸೋಜಾ ಅವರ ಆತ್ಮಹತ್ಯೆಗೆ ಕಾಂಗ್ರೆಸ್ ಮುಖಂಡ, ಡೇವಿಡ್ ಡಿಸೋಜಾ ಹಾಗೂ ಅವರ ಪುತ್ರ ಡೋಯ್ಸನ್ ಡಿಸೋಜಾ ಅವರು ಪ್ರೇರಣೆ ನೀಡಿದ್ದು ಅವರನ್ನು ಪೊಲೀಸರು ಬಂಧಿಸಿದ್ದಾರೆ" ಎಂಬ ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹರಡಲಾಗುತ್ತಿದೆ ಎಂದು ಎಫ್ಐಆರ್ನಲ್ಲಿ ನಮೂದಿಸಲಾಗಿದೆ.
"ಈ ಸುಳ್ಳು ಸುದ್ದಿಯಿಂದ ನನ್ನ ವೈಯಕ್ತಿಕ ಜೀವನದ ಮೇಲೆ ಪ್ರಭಾವ ಬೀರಿದ್ದು ಸಮಾಜದಲ್ಲಿ ತಲೆ ಎತ್ತಿ ನಡೆಯಲಾಗದಂತಹ ಪರಿಸ್ಥಿತಿ ಉಂಟಾಗಿದೆ. ಆರೋಪಿಗಳು ಈ ಮೊದಲು ನನ್ನ ವಿರುದ್ದ ಸುಳ್ಳು ಸುದ್ದಿ ಹರಿಯಬಿಟ್ಟಿದ್ದು, ಬಳಿಕ ಪೊಲೀಸ್ ಠಾಣೆಯಲ್ಲಿ ಈ ಕ್ಷಮೆ ಯಾಚಿಸಿದ್ದರು. ಇದಾದ ನಂತರ ಮಹೇಶ್ ಡಿಸೋಜಾ ಅವರ ಪ್ರಕರಣದ ದುರ್ಬಳಕೆ ಮಾಡಿಕೊಂಡು ಮತ್ತೊಮ್ಮೆ ನನ್ನ ವಿರುದ್ದ ವದಂತಿಗಳನ್ನು ಹಬ್ಬುತ್ತಿದ್ದಾರೆ ಎಂದು ಡೇವಿಡ್ ಡಿಸೋಜಾ ದೂರಿನಲ್ಲಿ ಆರೋಪಿಸಿದ್ದಾರೆ.
ನನ್ನ ಮಾನಹಾನಿಯಾಗಿದೆ. ಈ ಸಂದೇಶವನ್ನು ಹರಡಿರುವವರು ಸಾಮಾಜಿಕ ಜಾಲತಾಣವನ್ನು ಹೆಚ್ಚಾಗಿ ಬಳಸುತ್ತಾರೆ "ಆರೋಪಿಗಳು ಈ ಮೊದಲು ನನ್ನ ಕುರಿತು ಸುಳ್ಳು ಸಂದೇಶವನ್ನು ಹರಡಿದ್ದು ಪೊಲೀಸ್ ಠಾಣೆಯಲ್ಲಿ ಕ್ಷಮೆ ಕೇಳಿದ್ದರು. ಆದರೆ ಈಗ ಅವಕಾಶವನ್ನು ದುರ್ಬಳಕೆ ಮಾಡಿರುವ ಅವರು ಮತ್ತೊಮ್ಮೆ ನನ್ನ ಕುರಿತು ವದಂತಿಗಳನ್ನು ಹಬ್ಬುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಈ ಕುರಿತು ದಾಯ್ಜಿವರ್ಲ್ಡ್ನೊಂದಿಗೆ ಮಾತಾನಾಡಿದ ಡೇವಿಡ್ ಡಿಸೋಜಾ ಅವರು, "ನಾನು ಗ್ರಾಮ ಪಂಚಾಯತ್ ಅಧ್ಯಕ್ಷನಾಗಿ ನನ್ನಿಂದಾಗುವಷ್ಟು ಜನರಿಗೆ ಸೇವೆ ಸಲ್ಲಿಸುತ್ತಿದ್ದೇನೆ. ಆದರೆ ಈ ಸುಳ್ಳು ಆರೋಪ ನನಗೆ ಹಾಗೂ ನನ್ನ ಕುಟುಂಬಕ್ಕೆ ನೋವನ್ನುಂಟು ಮಾಡಿದೆ. ಆರೋಪಿಗಳಿಗೆ ಸರಿಯಾದ ಶಿಕ್ಷೆಯಾಗಬೇಕೆಂದು ಬಯಸುತ್ತೇನೆ" ಎಂದು ಹೇಳಿದ್ದಾರೆ.
"ಹಾಗೆಯೇ ಇನ್ನೂ ಕೆಲವರು ನನ್ನ ಕುರಿತು ಸುಳ್ಳು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸಂದೇಶವನ್ನು ಹರಡುತ್ತಿದ್ದಾರೆ. ನನಗೆ ಸೂಕ್ತ ದಾಖಲೆಗಳು ದೊರೆತ ಬಳಿಕ ಅವರ ಮೇಲೆಯೂ ದೂರು ದಾಖಲಿಸುತ್ತೇನೆ" ಎಂದು ತಿಳಿಸಿದ್ದಾರೆ.