ಉಡುಪಿ, ಡಿ 21 (Daijiworld News/MSP): ತೀವ್ರ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಗಳನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಆ ಬಳಿಕ ಮಾತನಾಡಿದ, ಪೇಜಾವರ ಶ್ರೀಗಳು ಶೀಘ್ರವಾಗಿ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ, ನಮ್ಮೆಲ್ಲರಿಗೂ ಅವರ ಮಾರ್ಗದರ್ಶನದ ಅವಶ್ಯಕತೆ ಇದೆ. ಬಹಳಷ್ಟು ಸಾರಿ ಪೇಜಾವರ ಶ್ರೀಗಳಿಗೆ ಹೆಚ್ಚು ಪ್ರವಾಸ ಮಾಡಬೇಡಿ ಆರೋಗ್ಯದ ಕಡೆ ಗಮನಕೊಡಿ ಎಂದು ವಿನಂತಿಸಿಕೊಂಡಿದ್ದೇನೆ. ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಶಂಕುಸ್ಥಾಪನೆಯ ವೇಳೆ ಪೇಜಾವರ ಶ್ರೀಗಳು ಉಪಸ್ಥಿತರಿರಬೇಕು ಎಂದು ನಮ್ಮೆಲ್ಲರ ಹಾರೈಕೆ ಎಂದು ಹೇಳಿದರು.
ಈ ವೇಳೆ ಸಿಎಂ ಯಡಿಯೂರಪ್ಪ ಅವರೊಂದಿಗೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಂಸದೆ ಶೋಭಾ ಕರಂದ್ಲಾಜೆ, ಕಾರ್ಕಳ ಶಾಸಕ ಸುನೀಲ್ ಕುಮಾರ್, ರಘುಪತಿ ಭಟ್, ಜಿಲ್ಲಾಧಿಕಾರಿ ಜಗದೀಶ್ ಆಸ್ಪತ್ರೆಗೆ ಭೇಟಿ ನೀಡಿದರು.
ಇದಕ್ಕೂ ಮುನ್ನ ಶನಿವಾರ ಮಧ್ಯಾಹ್ನ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವಿ ವಿರೇಂದ್ರ ಹೆಗ್ಗಡೆಯವರು ಮಣಿಪಾಲ ಆಸ್ಪತ್ರೆಗೆ ಭೇಟಿ ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಿದರು.