ಮಣಿಪಾಲ, ಡಿ 23 (Daijiworld News/MB) : ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಗಳ ಆರೋಗ್ಯದಲ್ಲಿ ಚೇತರಿಕೆಯಾಗಿದ್ದು ಈಗ ಚಿಕಿತ್ಸೆಗೆ ಸ್ಪಂದನೆ ನೀಡುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಪೇಜಾವರ ಶ್ರೀಗಳ ಶಿಷ್ಯೆ, ಬಿಜೆಪಿ ಹಿರಿಯ ನಾಯಕಿ ಉಮಾಭಾರತಿ ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಲಿದ್ದಾರೆ. ಹಾಗೆಯೇ ಇಂದು ಮಂಗಳೂರಿಗೆ ಆಗಮಿಸಲಿರುವ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ.
ಪೇಜಾವರ ಶ್ರೀಗಳ ಆರೋಗ್ಯದಲ್ಲಿ ಸಮಸ್ಯೆ ಉಂಟಾದ ಕಾರಣದಿಂದಾಗಿ ಅವರನ್ನು ಶುಕ್ರವಾರ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಕೃತಕ ಉಸಿರಾಟದೊಂದಿಗೆ ತೀವ್ರ ನಿಗಾ ಘಟಕದಲ್ಲಿಯೇ ಚಿಕಿತ್ಸೆ ಮುಂದುವರೆದಿದೆ. ಔಷಧಿ ಪ್ರಮಾಣ ಹೆಚ್ಚಳ ಮಾಡುವುದರ ಕುರಿತು ಹಾಗೂ ಚಿಕಿತ್ಸೆಯ ವಿಧಾನ ಬದಲು ಮಾಡುವ ಕುರಿತು ವೈದ್ಯರ ತಂಡ ನಿರ್ಧಾರ ಕೈಗೊಳ್ಳಲಿದೆ.