ಮಂಗಳೂರು, ಡಿ 25(Daijiworld News/MB) : "ಡಿ.9ರಂದು ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದಿದ್ದ ಹಿಂಸಾಚಾರದ ಪ್ರತಿಭಟನೆಯಲ್ಲಿ ಪೊಲೀಸ್ ಗುಂಡೇಟಿಗೆ ಬಲಿಯಾದ ಮೃತರಿಬ್ಬರು ಅಪರಾಧಿಗಳು ಎಂದು ಆದರೆ ಒಂದು ರೂಪಾಯಿಯು ಪರಿಹಾರ ಕೊಡುವುದಿಲ್ಲ" ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಈ ಬಗ್ಗೆ ಮಂಗಳೂರಿನಲ್ಲಿ ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, "ಅಪರಾಧ ಸಾಬೀತಾದರೆ, ಒಂದು ರೂಪಾಯಿಯು ಕೊಡಲ್ಲ. ಈ ಕುರಿತು ಚರ್ಚೆ ನಡೆಸಿ ಕ್ರಮ ತೆಗೆದುಕೊಳ್ಳುತ್ತೇವೆ. ಮೃತ ಪಟ್ಟವರಿಗೆ ಪರಿಹಾರ ಘೋಷಣೆ ಮಾಡಿಲ್ಲ" ಎಂದು ತಿಳಿಸಿದ್ದಾರೆ.
ಇದಕ್ಕೂ ಮೊದಲು ಸೆರ್ಕ್ಯೂಟ್ ಹೌಸ್ನಲ್ಲಿ ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ಈ ಘಟನೆಯ ಪ್ರಸಕ್ತ ಬೆಳವಣಿಗೆಯ ಕುರಿತು ಮಾಹಿತಿ ಪಡೆದರು.
ಈ ಹಿಂದೆ ಮುಖ್ಯಮಂತ್ರಿ ಯಡಿಯೂರಪ್ಪ "ಗೋಲಿಬಾರ್ನಲ್ಲಿ ಮೃತಪಟ್ಟವರಿಗೆ 10 ಲಕ್ಷ ರೂಪಾಯಿ ಪರಿಹಾರ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ" ಎಂದು ತಿಳಿಸಿದ್ದರು.