ಮಂಗಳೂರು, ಡಿ 28 (Daijiworld News/MB) : ನಗರದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ನಡೆದ ಗೋಲಿಬಾರ್ನಿಂದಾಗಿ ಮೃತಪಟ್ಟ ಕುಟುಂಬಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪರಿಹಾರ ಘೋಷಿಸಿದ್ದು, ಅದರ ಚೆಕ್ ನೀಡುವ ಸಲುವಾಗಿ ತೃಣಮೂಲ ಕಾಂಗ್ರೆಸ್ನ ಇಬ್ಬರು ನಾಯಕರು ಇಂದು ಬೆಳಿಗ್ಗೆ ಮಂಗಳೂರಿಗೆ ಆಗಮಿಸಿದ್ದಾರೆ.
ಮಂಗಳೂರಿನ ಗೋಲಿಬಾರ್ನಿಂದ ಮೃತಪಟ್ಟ ಕುಟುಂಬಕ್ಕೆ ಪಶ್ಷಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದರು. ಆ ಪರಿಹಾರದ ವಿತರಣೆ ಮಾಡಲು ತೃಣಮೂಲ ಕಾಂಗ್ರೆಸ್ ನ ಮಾಜಿ ರೈಲ್ವೆ ಸಚಿವ ದಿನೇಶ್ ದ್ವಿವೇದಿ ಮತ್ತು ರಾಜ್ಯಸಭಾ ಸದಸ್ಯರಾದ ಎಂಡಿ ನದೀಮುಲ್ ಹಕ್ ಅವರು ಆಗಮಿಸಿದ್ದಾರೆ.
"ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ವಿಶ್ವದಾತ್ಯಂತ ಪ್ರತಿಭಟನೆ ನಡೆಯುತ್ತಿದೆ. ಆದರೆ ಮಂಗಳೂರಿನಲ್ಲಿ ಮಾತ್ರ ಗೋಲಿಬಾರ್ ನಡೆಸಿದ್ದಾರೆ. ಪೊಲೀಸರ ಈ ಕ್ರಮ ಖಂಡನೀಯ. ಇದು ನಾಗರಿಕ ಸಮಾಜವೇ ತಲೆತಗ್ಗಿಸುವಂತ ಘಟನೆ" ಎಂದು ಹೇಳಿದ್ದಾರೆ.