ಉಡುಪಿ, ಡಿ 28(Daijiworld News/PY) : ಉಸಿರಾಟದ ತೊಂದರೆಯಂದ ಆಸ್ಪತ್ರೆಗೆ ದಾಖಲಾಗಿದ್ದ ಪೇಜಾವರ ಶ್ರೀಗಳ ಆರೋಗ್ಯದ ಸ್ಥಿತಿ ತೀವ್ರ ಹದಗೆಟ್ಟಿದೆ ಎಂದು ತಿಳಿದುಬಂದಿದೆ.
ಶ್ರೀಗಳಿಗೆ ನ್ಯೂಮೊನಿಯಾದಿಂದ ಉಸಿರಾಡಲು ತೊಂದರೆಯಾಗುತ್ತಿದ್ದು ತಕ್ಷಣವೇ ಶ್ರೀಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ, ಯಾವುದೇ ಚೇತರಿಕೆ ಕಂಡುಬಂದಿಲ್ಲ, ಜೀವರಕ್ಷಕ ಸಾಧನಗಳು ಅಳವಡಿಸಿದ್ದರೂ, ಶ್ರೀಗಳ ದೇಹ ಸ್ಥಿತಿ ದಿನದಿಂದ ದಿನಕ್ಕೆ ಕ್ಷೀಣೀಸುತ್ತಿದೆ,ಮೆದುಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ, ಪರಿಸ್ಥಿತಿ ತೀರಾ ಗಂಭೀರವಾಗಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶ್ರೀಗಳನ್ನು ಭೇಟಿ ಮಾಡಲು ಗಣ್ಯರು ಆಗಮಿಸುತ್ತಿದ್ದಾರೆ. ಆದರೆ ಶನಿವಾರದಿಂದ ಶ್ರೀಗಳ ಭೇಟಿಗೆ ಅವಕಾಶ ನಿರಾಕರಿಸಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಬೆಂಗಳೂರಿನ ಮಣಿಪಾಲ ಆಸ್ಪತ್ರೆಯ ತಜ್ಞ ವೈದ್ಯರಿಬ್ಬರು ಶ್ರೀಗಳ ಚಿಕಿತ್ಸೆಗೆ ಸಲಹೆ ನೀಡುತ್ತಿದ್ದು, ಮಣಿಪಾಲದ ತಜ್ಞ ವೈದ್ಯರ ತಂಡವು ದಿಲ್ಲಿಯ ಏಮ್ಸ್ ತಜ್ಞರ ಸಂಪರ್ಕದಲ್ಲಿದ್ದರೂ ಶುಕ್ರವಾರದಿಂದ ದೇಹ ಚೇತರಿಕೆ ಹಾಗೂ ಚಿಕಿತ್ಸೆಗೆ ನಿಧಾನವಾಗಿ ಸ್ಪಂದನೆ ನೀಡುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.