ಉಡುಪಿ, ಡಿ 28(Daijiworld News/PY) : ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿಯನ್ನು ವಿಚಾರಿಸಲು ಉಡುಪಿಗೆ ಆಗಮಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶ್ರೀಗಳ ಆರೋಗ್ಯ ಕ್ಷೀಣಿಸುತ್ತಿರುವ ಕಾರಣ ಇಂದು ಮತ್ತು ನಾಳೆ ಉಡುಪಿಯಲ್ಲೇ ತಂಗಲಿದ್ದಾರೆ.
ಶನಿವಾರ ಸಾಯಂಕಾಲ ಉಡುಪಿಗೆ ಆಗಮಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಸ್ಪತ್ರೆಗೆ ಭೇಟಿ ನೀಡಿ ಶ್ರೀಗಳ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ.
ನಂತರ ಮಾಧ್ಯಮದವೊಂದಿಗೆ ಮಾತನಾಡಿದ ಸಿಎಂ, ಪೇಜಾವರ ಶ್ರೀಗಳ ಆರೋಗ್ಯದ ಸ್ಥಿತಿ ಕ್ಷಣ ಕ್ಷಣಕ್ಕೂ ಕ್ಷೀಣಿಸುತ್ತಿದೆ, ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡುತ್ತಿದ್ದರೂ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿಲ್ಲ, ವೈದ್ಯರು ಚಿಕಿತ್ಸೆ ನೀಡುವತ್ತ ಪ್ರಯತ್ನ ಮುಂದುವರಿಸಿದ್ದಾರೆ, ಇಂದು ಮತ್ತು ನಾಳೆ ನಾನು ಉಡುಪಿಯಲ್ಲೆ ತಂಗಲಿದ್ದೇನೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.