ಮಂಜೇಶ್ವರ, ಡಿ 30 (DaijiworldNews/SM): ಡಿವೈಎಫ್ಐ ಕಾರ್ಯಕರ್ತರ ಮೇಲೆ ತಂಡವೊಂದು ಹಲ್ಲೆ ನಡೆಸಿದ ಘಟನೆ ಮಂಜೇಶ್ವರದಲ್ಲಿ ನಡೆದಿದೆ.
ಘಟನೆಯಲ್ಲಿ ಗಾಯಗೊಂಡವರನ್ನು ಕಲಂದರ್, ಇಮ್ತಿಯಾಜ್, ಇರ್ಫಾನ್ ಎಂದು ಗುರುತಿಸಲಾಗಿದೆ. ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಯುವಕರ ಮೇಲೆ ಹಲ್ಲೆ ನಡೆಸಿ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ. ಗಾಯಗೊಂಡವರನ್ನು ತಕ್ಷಣ ಸ್ಥಳೀಯರ ಸಹಕಾರದೊಂದಿಗೆ ಕುಂಬಳೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುಮಾರು ಹದಿನೈದು ಮಂದಿಯ ತಂಡ ಈ ಕೃತ್ಯ ನಡೆಸಿದ್ದಾರೆ. ಆರ್ ಎಸ್ ಎಸ್ ಕಾರ್ಯಕರ್ತರು ಹಲ್ಲೆ ನಡೆಸಿರುವುದಾಗಿ ಗಾಯಾಳುಗಳು ಆರೋಪಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುನ್ನಡೆಸಿದ್ದಾರೆ.